ADVERTISEMENT

ಮಲ್ಯ ಅರ್ಜಿ ವಜಾ

​ಪ್ರಜಾವಾಣಿ ವಾರ್ತೆ
Published 20 ಸೆಪ್ಟೆಂಬರ್ 2019, 19:49 IST
Last Updated 20 ಸೆಪ್ಟೆಂಬರ್ 2019, 19:49 IST
   

ಬೆಂಗಳೂರು: ‘ಬ್ಯಾಂಕುಗಳಿಗೆ ಸಾಲ ತೀರಿಸುವ ಪ್ರಕರಣಕ್ಕೆ ಸಂಬಂಧಿಸಿದಂತೆ ₹ 3,101 ಕೋಟಿ ಠೇವಣಿ ಇರಿಸಬೇಕು’ ಎಂಬ ಸಾಲ ವಸೂಲಾತಿ ಮೇಲ್ಮನವಿ ನ್ಯಾಯಮಂಡಳಿ (ಡಿಆರ್‌ಎಟಿ) ಆದೇಶದ ಸಂಬಂಧ ವಿಜಯ್‌ ಮಲ್ಯ ಸಲ್ಲಿಸಿದ್ದ ಮರು ಪರಿಶೀಲನಾ ಅರ್ಜಿಯನ್ನು ಹೈಕೋರ್ಟ್‌ ವಜಾಗೊಳಿಸಿದೆ.

ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕಾ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ವಿಭಾಗೀಯ ಪೀಠ, ‘2018ರ ಅ.5ರಂದು ಹೈಕೋರ್ಟ್ ಹೊರಡಿಸಿದ ಆದೇಶದಲ್ಲಿ ಮಧ್ಯಪ್ರವೇಶ ಮಾಡಲು ಸಕಾರಣಗಳು ಕಂಡುಬಂದಿಲ್ಲ’ ಎಂದು ಅಭಿಪ್ರಾಯಪಟ್ಟಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT