ADVERTISEMENT

ವಿಜಯನಗರ ಜಿಲ್ಲೆ ಉದ್ಘಾಟನೆ ಇಂದು

​ಪ್ರಜಾವಾಣಿ ವಾರ್ತೆ
Published 1 ಅಕ್ಟೋಬರ್ 2021, 20:09 IST
Last Updated 1 ಅಕ್ಟೋಬರ್ 2021, 20:09 IST
ವಿಜಯನಗರ ಜಿಲ್ಲೆ ಉದ್ಘಾಟನಾ ಸಮಾರಂಭ ನಡೆಯಲಿರುವ ಹೊಸಪೇಟೆ ಜಿಲ್ಲಾ ಕ್ರೀಡಾಂಗಣದ ಪ್ರವೇಶ ದ್ವಾರದಲ್ಲಿ ಶುಕ್ರವಾರ ಸಂಜೆ ಹಂಪಿ ಸಪ್ತಸ್ವರ ಮಂಟಪದ ಪ್ರಕೃತಿ ನಿರ್ಮಿಸುವ ಕೆಲಸ ನಡೆಯಿತು
ವಿಜಯನಗರ ಜಿಲ್ಲೆ ಉದ್ಘಾಟನಾ ಸಮಾರಂಭ ನಡೆಯಲಿರುವ ಹೊಸಪೇಟೆ ಜಿಲ್ಲಾ ಕ್ರೀಡಾಂಗಣದ ಪ್ರವೇಶ ದ್ವಾರದಲ್ಲಿ ಶುಕ್ರವಾರ ಸಂಜೆ ಹಂಪಿ ಸಪ್ತಸ್ವರ ಮಂಟಪದ ಪ್ರಕೃತಿ ನಿರ್ಮಿಸುವ ಕೆಲಸ ನಡೆಯಿತು   

ಹೊಸಪೇಟೆ (ವಿಜಯನಗರ): ರಾಜ್ಯದ 31ನೇ ಜಿಲ್ಲೆಯಾಗಿ ಉದಯಗೊಂಡಿರುವ ವಿಜಯನಗರದ ಅಧಿಕೃತ ಉದ್ಘಾಟನಾ ಸಮಾರಂಭ ಶನಿವಾರ (ಅ. 2) ಇಲ್ಲಿನ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ.

ಕಾರ್ಯಕ್ರಮ ನಡೆಯಲಿರುವ ಜಿಲ್ಲಾ ಕ್ರೀಡಾಂಗಣ ಮಿನಿ ಹಂಪಿಯಾಗಿ ಬದಲಾಗಿದೆ. ಬೆಟ್ಟ–ಗುಡ್ಡ, ವಿರೂಪಾಕ್ಷೇಶ್ವರ ದೇವಸ್ಥಾನ, ಸಾಲು ಮಂಟಪ, ಉಗ್ರ ನರಸಿಂಹ, ಸಪ್ತಸ್ವರ ಮಂಟಪ ನಿರ್ಮಿಸಲಾಗಿದೆ.

ಪ್ರವೇಶ ದ್ವಾರದ ಮುಂಭಾಗದಲ್ಲಿ 40 ಅಡಿ ಎತ್ತರದ ಶ್ರೀಕೃಷ್ಣದೇವರಾಯನ ಫೈಬರ್‌ ಪುತ್ಥಳಿ ಪ್ರತಿಷ್ಠಾಪಿಸಲಾಗಿದೆ. ನಗರದ ಎಲ್ಲಾ ರಸ್ತೆಗಳಿಗೆ ವಿದ್ಯುತ್‌ ದೀಪಗಳ ಅಲಂಕಾರ ಮಾಡಲಾಗಿದೆ. ತಳಿರು ತೋರಣ ಕಟ್ಟಲಾಗಿದೆ.

ADVERTISEMENT

ಶನಿವಾರ ಸಂಜೆ 6ಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೊಸ ಜಿಲ್ಲೆ ಉದ್ಘಾಟಿಸುವರು. ಜಿಲ್ಲೆ ಘೋಷಣೆ ಮಾಡಿದ ಮಾಜಿ ಮುಖ್ಯಮಂತ್ರಿ, ಶಾಸಕ ಬಿ.ಎಸ್‌. ಯಡಿಯೂರಪ್ಪನವರ ಸನ್ಮಾನ ನಡೆಯಲಿದೆ. ಜಿಲ್ಲಾ ಉಸ್ತುವಾರಿ ಸಚಿವ ಆನಂದ್‌ ಸಿಂಗ್‌ ಅಧ್ಯಕ್ಷತೆ ವಹಿಸುವರು. ಕಲಾ ತಂಡಗಳ ಮೆರವಣಿಗೆ, ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.