ವಿಜಯಪುರ: ಕೋವಿಡ್ 19 ರಿಂದ ಬಳಲುತ್ತಿದ್ದ 66 ವರ್ಷ ವಯುಸ್ಸಿನ ಮಹಿಳೆಯೊಬ್ಬರು ಜಿಲ್ಲಾಸ್ಪತ್ರೆಯಲ್ಲಿ ಗುರುವಾರ ಸಾವಿಗೀಡಾಗಿದ್ದಾರೆ.
ತೀವ್ರ ಉಸಿರಾಟ ಮತ್ತು ಜ್ವರದಿಂದ ಬಳಲುತ್ತಿದ್ದ ಮಹಿಳೆ ಜೂನ್ 15ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಈ ಮೂಲಕ ಜಿಲ್ಲೆಯಲ್ಲಿ ಕೋವಿಡ್ನಿಂದ ಸಾವಿಗೀಡಾದವರ ಸಂಖ್ಯೆ ಏಳಕ್ಕೆ ಏರಿಕೆಯಾಗಿದೆ.
ಜಿಲ್ಲೆಯಲ್ಲಿ ಗುರುವಾರ ಸಾವಿಗೀಡಾದ ಮಹಿಳೆ ಮತ್ತು 39 ವರ್ಷ ವಯಸ್ಸಿನ ವ್ಯಕ್ತಿ ಸೇರಿದಂತೆ ಇಬ್ಬರಿಗೆ ಸೋಂಕು ದೃಡಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ 238ಕ್ಕೆ ಏರಿಕೆಯಾಗಿದೆ. 196 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 35 ಜನ ಸಕ್ರಿಯ ರೋಗಿಗಳು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.