ADVERTISEMENT

ವಿಜಯಪುರ–ಮಂಗಳೂರು ವಿಶೇಷ ರೈಲು ಸಂಚಾರ ನ.11ರಿಂದ

​ಪ್ರಜಾವಾಣಿ ವಾರ್ತೆ
Published 8 ನವೆಂಬರ್ 2019, 15:26 IST
Last Updated 8 ನವೆಂಬರ್ 2019, 15:26 IST
ರೈಲು
ರೈಲು   

ಹುಬ್ಬಳ್ಳಿ: ವಿಜಯಪುರ–ಮಂಗಳೂರು ಜಂಕ್ಷನ್ ನಡುವೆ ನವೆಂಬರ್‌ 11ರಿಂದ ಫೆಬ್ರುವರಿ 12ರ ವರಗೆ ದೈನಂದಿನ ತತ್ಕಾಲ್ ಎಕ್ಸ್‌ಪ್ರೆಸ್ ವಿಶೇಷ ರೈಲು ಸಂಚರಿಸಲಿದೆ.

ವಿಜಯಪುರದಿಂದ ಪ್ರತಿದಿನ ಸಂಜೆ 6ಕ್ಕೆ ಹೊರಡುವ ರೈಲು (07327), ಬಾಗಲಕೋಟೆ, ಗದಗ, ಹುಬ್ಬಳ್ಳಿ, ಹಾವೇರಿ, ದಾವಣಗೆರೆ, ಕಡೂರು, ಅರಸೀಕೆರೆ, ಹಾಸನ, ಸಕಲೇಶಪುರ, ಸುಬ್ರಹ್ಮಣ್ಯ, ಪುತ್ತೂರು, ಬಂಟ್ವಾಳ ಮೂಲಕವಾಗಿ ಮರುದಿನ ಮಧ್ಯಾಹ್ನ 12.40ಕ್ಕೆ ಮಂಗಳೂರು ಜಂಕ್ಷನ್‌ ತಲುಪಲಿದೆ.

ಮಂಗಳೂರು ಜಂಕ್ಷನ್‌ನಿಂದ ಪ್ರತಿದಿನ ಸಂಜೆ 4.30ಗೆ ಹೊರಡುವ ರೈಲು (ರೈಲು ಸಂಖ್ಯೆ 07328) ಅದೇ ಮಾರ್ಗವಾಗಿ ಮರುದಿನ ಬೆಳಿಗ್ಗೆ 11.45ಕ್ಕೆ ವಿಜಯಪುರಕ್ಕೆ ಆಗಮಿಸಲಿದೆ ಎಂದು ನೈರುತ್ಯ ರೈಲ್ವೆ ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.