ವಿಜಯೇಂದ್ರ
(ಸಂಗ್ರಹ ಚಿತ್ರ)
ಬೆಂಗಳೂರು: ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಲೆಲ್ಲ ಬಿತ್ತನೆ ಬೀಜ, ರಸಗೊಬ್ಬರಕ್ಕೂ ಮಧ್ಯವರ್ತಿಗಳು ಹುಟ್ಟಿಕೊಳ್ಳುತ್ತಾರೆ. ಕೃತಕ ಅಭಾವ ಸೃಷ್ಟಿಸುತ್ತಾರೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಆರೋಪಿಸಿದರು.
ಸುದ್ದಿಗಾರರ ಜತೆ ಮಾತನಾಡಿದ ಅವರು, ರಾಜ್ಯ ಸರ್ಕಾರ ರಸಗೊಬ್ಬರ ಸಂಗ್ರಹಕ್ಕೆ ಪೂರ್ವಸಿದ್ಧತೆ ಮಾಡಿಕೊಂಡಿಲ್ಲ. ಯಾವ ಜಿಲ್ಲೆಗೆ ಎಷ್ಟು ಗೊಬ್ಬರದ ಅಗತ್ಯವಿದೆ ಎಂಬ ಮಾಹಿತಿಯೇ ಇಲ್ಲ. ಲೆಕ್ಕಾಚಾರ ಇಲ್ಲದೇ ರೈತರಿಗೆ ಆತಂಕದ ಸ್ಥಿತಿ ಉಂಟಾಗಿದೆ. ಇಂತಹ ಸ್ಥಿತಿಯ ಲಾಭ ಪಡೆದ ಮಧ್ಯವರ್ತಿಗಳು ಕೃತಕ ಅಭಾವ ಸೃಷ್ಟಿಸಿ, ಅಧಿಕ ಲಾಭ ಮಾಡಿಕೊಳ್ಳುತ್ತಿದ್ದಾರೆ ಎಂದರು.
‘ರಸಗೊಬ್ಬರ ದಾಸ್ತಾನಿದೆ. ಕೊರತೆ ಇಲ್ಲ’ ಎಂದು ಕೃಷಿ ಸಚಿವರು ಹೇಳಿದ್ದಾರೆ. ಹಾಗಾದರೆ ರೈತರು ಏಕೆ ಹೋರಾಟ ನಡೆಸುತ್ತಿದ್ದಾರೆ? ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ಸಚಿವ ಜೆ.ಪಿ. ನಡ್ಡಾ ಅವರಿಗೆ ಶುಕ್ರವಾರ ಪತ್ರ ಬರೆದಿದ್ದಾರೆ. ಮುಂಗಾರು 25 ದಿನಗಳು ಮೊದಲೇ ಆರಂಭವಾದರೂ, ಸರ್ಕಾರ ನಿರ್ಲಕ್ಷ್ಯ ಮಾಡಿದೆ. ಈಗ ಕೇಂದ್ರ ಸಹಕಾರ ನೀಡುತ್ತಿಲ್ಲ ಎನ್ನುತ್ತಿದ್ದಾರೆ. ರಾಜ್ಯದ ನಿರೀಕ್ಷೆ ಇದ್ದದ್ದು 6,31,000 ಟನ್, ಜುಲೈ ಅಂತ್ಯಕ್ಕೆ ಕೇಂದ್ರದಿಂದ ಬಂದಿರುವುದು 8,73,000 ಟನ್. ರಾಜ್ಯ ಸರ್ಕಾರ ಸಲ್ಲಿಸಿದ ಬೇಡಿಕೆಗಿಂತ ಹೆಚ್ಚು ರಸಗೊಬ್ಬರ ರಾಜ್ಯಕ್ಕೆ ಬಂದಿದೆ ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.