ADVERTISEMENT

ಬಿಹಾರದಲ್ಲಿ ಬಿಜೆಪಿ ಸೋಲಿಸಲು ವಿಜಯೇಂದ್ರ ಅವರಿಂದ ಹಣ ಸಂದಾಯ: ಯತ್ನಾಳ್ ಬಾಂಬ್

​ಪ್ರಜಾವಾಣಿ ವಾರ್ತೆ
Published 18 ಫೆಬ್ರುವರಿ 2021, 11:13 IST
Last Updated 18 ಫೆಬ್ರುವರಿ 2021, 11:13 IST
   

ಬೆಂಗಳೂರು: 'ಬಿಹಾರದ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಲುವಿಜಯೇಂದ್ರ ತಮ್ಮ ಆಪ್ತರ ಮೂಲಕ ಹಣ ಎಷ್ಟು ಕಳುಹಿಸಿದ್ದಾರೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗಂಭೀರ ಆರೋಪ ಮಾಡಿದ್ದಾರೆ.

ಪ್ರಧಾನಿ ಮೋದಿ ಶಕ್ತಿ ಕುಗ್ಗಿಸಲು ಹಣ ಸಂದಾಯ ಮಾಡಿದ್ದಾರೆ. ಆರ್‌ಜೆಡಿ, ಕಾಂಗ್ರೆಸ್ ಗೆ ವಿಜಯೇಂದ್ರ ಫಂಡಿಂಗ್ ಮಾಡಿದ್ದಾರೆ. ಇದೆಲ್ಲದರ ಬಗ್ಗೆ ತನಿಖೆ ಆಗಬೇಕು' ಎಂದಿದ್ದಾರೆ.

'ಭ್ರಷ್ಟಾಚಾರ, ಹಸ್ತಕ್ಷೇಪ, ವರ್ಗಾವಣೆ ದಂಧೆ ಬಗ್ಗೆ ತನಿಖೆ ಮಾಡಬೇಕು ಎಂದೂ ಪತ್ರದಲ್ಲಿ ಹೇಳಿದ್ದೇನೆ. ನೋಟಿಸ್ ಗೆ ಉತ್ತರ ಕೊಡುವಾಗ ಪತ್ರದಲ್ಲಿ ಎಲ್ಲೂ ಕ್ಷಮೆ ಯಾಚಿಸಿಲ್ಲ. ಪ್ರತಿ ಪ್ಯಾರದ ವಿಚಾರಗಳನ್ನು ಹಂತ ಹಂತವಾಗಿ ಮಾಧ್ಯಮದ ಮುಂದೆ ಹೇಳುತ್ತೇನೆ' ಎಂದೂ ಹೇಳಿದರು.

ADVERTISEMENT

'ಪತ್ರದಲ್ಲು ಸಿಡಿ, ಇಡಿ ಬಗ್ಗೆಯೂ ಉಲ್ಲೇಖಿಸಿದ್ದೇನೆ.‌ ಮಾರಿಷಸ್ ವಿಚಾರವನ್ನು ಬರೆದಿದ್ದೇನೆ. ಮಾರಿಷಸ್ ಗೆ ಯಾಕೆ ಹೋಗಿದ್ದರು. ಎಷ್ಟು ಮಂದಿ ಹೋಗಿದ್ದರು. ಯಾವ ಫ್ಲೈಟ್ ನಲ್ಲಿ ಹೋಗಿದ್ದರು. ಆ ಫ್ಲೈಟ್ ನಂಬರ್ ಏನು ? ಮಾಜಿ ಗೃಹ ಸಚಿವರೊಬ್ಬರ ಪಿಎ ಮೂಲಕ ಮಾರಿಷಸ್ ಗೆ ಹೋಗಿ ಏನೇನು ತಗೊಂಡಿದ್ದಾರೆ. ಇದೆಲ್ಲವನ್ನೂ ಪತ್ರದಲ್ಲಿ ಉಲ್ಲೇಖಿಸಿದ್ದೇನೆ. ಇದರ ತನಿಖೆ ಮಾಡಲು‌ ಆಗ್ರಹಿಸಿದ್ದೇನೆಎಂದರು.

'ಸಿದ್ದರಾಮಯ್ಯ ಸುಪ್ರೀಂ ಕೋರ್ಟ್ ಆದೇಶಕ್ಕೆ ಅಪಚಾರ ಮಾಡಿದ್ದಾರೆ. ರಾಮಮಂದಿರ ವಿಚಾರದಲ್ಲಿ ಸುಪ್ರೀಂ ಕೋರ್ಟ್ ಆದೇಶ ನೀಡಿದೆ. ಮುಂದಿನ ದಿನಗಳಲ್ಲಿ ಅವರ ಹೇಳಿಕೆ ವಿರುದ್ಧ ಕಾನೂನು ಹೋರಾಟ ಮಾಡಲಾಗುವುದು. ಮುಸ್ಲಿಂ ಓಟ್ ಗಾಗಿ ಈ ರೀತಿ ಮಾತಾಡ್ತಾರೆ ಎಂದು ಸಿದ್ದರಾಮಯ್ಯ ವಿರುದ್ದವೂ ಯತ್ನಾಳ್ ಗರಂ ಆದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.