ADVERTISEMENT

ವಿಜಯೇಂದ್ರಗೆ ಸಚಿವ ಸ್ಥಾನದ ಬೇಡಿಕೆ ಇಟ್ಟಿಲ್ಲ: ಬಿ.ವೈ. ರಾಘವೇಂದ್ರ

ರಾಜ್ಯ ರಾಜಕಾರಣಕ್ಕೆ ಬರುವುದಿಲ್ಲ ಎಂದ ಸಂಸದ

​ಪ್ರಜಾವಾಣಿ ವಾರ್ತೆ
Published 12 ಅಕ್ಟೋಬರ್ 2021, 19:32 IST
Last Updated 12 ಅಕ್ಟೋಬರ್ 2021, 19:32 IST
ಬಿ.ವೈ.ರಾಘವೇಂದ್ರ
ಬಿ.ವೈ.ರಾಘವೇಂದ್ರ   

ಶಿವಮೊಗ್ಗ: ‘ಸಹೋದರ ಬಿ.ವೈ. ವಿಜಯೇಂದ್ರ ಅವರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪುಟದಲ್ಲಿ ಸ್ಥಾನ ನೀಡುವಂತೆ ಬೇಡಿಕೆ ಇಟ್ಟಿಲ್ಲ’ ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದರು.

ನಗರದಲ್ಲಿ ಮಂಗಳವಾರ ಸುದ್ದಿಗಾರರ ಜತೆ ಮಾತನಾಡಿದಅವರು, ‘ಪಕ್ಷದ ನಿರ್ದೇಶನದಂತೆ ವಿಜಯೇಂದ್ರ ಸಂಘಟನೆಯ ಕೆಲಸ ಮಾಡುತ್ತಿದ್ದಾರೆ. ನಾನು ರಾಷ್ಟ್ರ ರಾಜಕಾರಣದಲ್ಲೇ ಮುಂದುವರಿಯುವೆ. ಶಿವಮೊಗ್ಗ ಲೋಕಸಭಾ ಕ್ಷೇತ್ರದ ಜನರು ಮೂರು ಬಾರಿ ಸಂಸದನನ್ನಾಗಿ ಆಯ್ಕೆ ಮಾಡಿದ್ದಾರೆ. ಹೀಗಾಗಿ ರಾಜ್ಯ ರಾಜಕಾ‌ರಣಕ್ಕೆ ಬರುವುದಿಲ್ಲ. ಒಂದು ವಿಧಾನಸಭಾ ಕ್ಷೇತ್ರಕ್ಕೆ ಸೀಮಿತವಾಗದೆ ಲೋಕಸಭಾ ಕ್ಷೇತ್ರದ ಜನರ ಸೇವೆ ಮಾಡುವೆ’ಎಂದು ಉತ್ತರಿಸಿದರು.

‘ಪಕ್ಷದ ವರಿಷ್ಠರು ಒಪ್ಪಿದರೆ ರಾಜ್ಯ ರಾಜಕಾರಣ ಪ್ರವೇಶಿಸುತ್ತೇನೆ’ ಎಂದು ಸೋಮವಾರವಷ್ಟೇ ಅವರು ಹೇಳಿಕೆ ನೀಡಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.