ಬಿಜೆಪಿ ಜನಾಕ್ರೋಶ ಯಾತ್ರೆ
ಉಡುಪಿ: ರಾಜ್ಯ ಸರ್ಕಾರದ ವಿರುದ್ಧ ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್ ಮಾಡುವ ಬಿಜೆಪಿ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲಿಸಿ, ದಬ್ಬಾಳಿಕೆ ನಡೆಸಲಾಗುತ್ತಿದೆ. ಇಲ್ಲಿರುವುದು ಜನವಿರೋಧಿ ಹಿಟ್ಲರ್ ಸರ್ಕಾರ ಎಂದು ಬಿಜೆಪಿ ರಾಜ್ಯ ಘಟಕ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು.
ಉಡುಪಿಯಲ್ಲಿ ಗುರುವಾರ ಹಮ್ಮಿಕೊಂಡಿದ್ದ ಬಿಜೆಪಿ ಜನಾಕ್ರೋಶ ಯಾತ್ರೆಯಲ್ಲಿ ಅವರು ಮಾತನಾಡಿದರು.
ನಮ್ಮ ಕಾರ್ಯಕರ್ತರ ಮೇಲೆ ದಬ್ಬಾಳಿಕೆ ನಡೆಸುವ ಕಾಂಗ್ರೆಸ್ ಪುಢಾರಿಗಳಿಗೆ ಬಡ್ಡಿ ಸಮೇತ ಉತ್ತರ ಕೊಡಲಾಗುವುದು ಎಂದರು.
ಮುಸ್ಲಿಂ ಯುವತಿಯರಿಗೆ ಆತ್ಮರಕ್ಷಣೆ ತರಬೇತಿ ನೀಡುವ ಬಗ್ಗೆ ಮುಖ್ಯಮಂತ್ರಿ ಹೇಳಿದ್ದಾರೆ. ಕರ್ನಾಟಕದಲ್ಲಿ ಲವ್ ಜಿಹಾದ್‌ಗೆ ಹಿಂದೂ ಯುವತಿಯರು ಬಲಿಯಾಗುತ್ತಿದ್ದಾರೆ. ಆದ್ದರಿಂದ ಹಿಂದೂ ಯುವತಿಯರಿಗೆ ಆತ್ಮರಕ್ಷಣೆ ತರಬೇತಿ ನೀಡಬೇಕಾಗಿದೆ ಎಂದು ಹೇಳಿದರು.
ಅಹಿಂದ ಹೆಸರು ಹೇಳಿಕೊಂಡು ಮುಖ್ಯಮಂತ್ರಿಯಾದ ಸಿದ್ದರಾಮಯ್ಯ ಅವರು ಹಿಂದುಳಿದ ಸಮುದಾಯಗಳನ್ನು ಕಡೆಗಣಿಸಿ, ಅಲ್ಪಸಂಖ್ಯಾತರನ್ನು ಓಲೈಕೆ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
ಉಡುಪಿಯ ಕಲ್ಸಂಕದಿಂದ ಕಡಿಯಾಳಿಯ ಬಿಜೆಪಿ ಕಚೇರಿವರೆಗೆ ಜನಾಕ್ರೋಶ ಯಾತ್ರೆ ಸಾಗಿ ಅಲ್ಲಿ ಸಮಾವೇಶ ನಡೆಯಿತು.
ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣ ಸ್ವಾಮಿ, ಮಾಜಿ ಸಚಿವ ಶ್ರೀರಾಮುಲು, ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ, ಬ್ರಿಜೇಶ್ ಚೌಟ, ಶಾಸಕರಾದ ಯಶ್‌ಪಾಲ್ ಸುವರ್ಣ, ಕಿರಣ್ ಕುಮಾರ್ ಕೋಡ್ಗಿ, ಗುರ್ಮೆ ಸುರೇಶ್ ಶೆಟ್ಟಿ, ಗುರುರಾಜ್ ಗಂಟಿಹೊಳೆ, ಹರೀಶ್ ಪೂಂಜಾ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.