ADVERTISEMENT

ವಿಜಯೇಂದ್ರ ಕಡೆಯಿಂದ ಆಡಿಯೊ ಸೋರಿಕೆ: ಯತ್ನಾಳ

​ಪ್ರಜಾವಾಣಿ ವಾರ್ತೆ
Published 19 ಜುಲೈ 2021, 18:47 IST
Last Updated 19 ಜುಲೈ 2021, 18:47 IST
ಶಾಸಕ ಬಸನಗೌಡ ಪಾಟೀಲ ಯತ್ನಾಳ
ಶಾಸಕ ಬಸನಗೌಡ ಪಾಟೀಲ ಯತ್ನಾಳ   

ಬೆಂಗಳೂರು:‘ಕಟೀಲ್ ಅವರು ಮಾತನಾಡಿರುವ ಆಡಿಯೊ ಸೋರಿಕೆ ಪ್ರಕರಣದ ತನಿಖೆ ಆಗಬೇಕು. ಮುಖ್ಯಮಂತ್ರಿ ಅವರ ಪುತ್ರ ಬಿ.ವೈ. ವಿಜಯೇಂದ್ರ ಅವರಿಗೆ ಆಪ್ತರಾಗಿರುವವರು ಸಿಸಿಬಿಯಲ್ಲಿದ್ದಾರೆ. ಹೀಗಾಗಿ ಎಲ್ಲವೂ ಸೋರಿಕೆಯಾಗುತ್ತಿದೆ’ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿಜಯಪುರದಲ್ಲಿ ಆರೋಪಿಸಿದ್ದಾರೆ.

’ಖಾಸಗಿಯಾಗಿ ಮಾತನಾಡಿದ್ದನ್ನ ರೆಕಾರ್ಡ್ ಮಾಡಿಕೊಳ್ಳುವುದು ಅಪರಾಧವಾಗುತ್ತದೆ. ವ್ಯಕ್ತಿಗತ ಗೋಪ್ಯತೆಗೆ ರಾಜ್ಯದಲ್ಲಿ ಅವಕಾಶವೇ ಇಲ್ಲದಂತಾಗಿದೆ. ರಾಜ್ಯದಲ್ಲಿ ಏನು ಬೇಕಾದದ್ದು ನಡೆಯುತ್ತಿದೆ. ಸಿಸಿಬಿಯವರು ಏನ್ ಮಾಡ್ತಿದ್ದಾರೆ? ರಾಜ್ಯ ಸರ್ಕಾರ ಡ್ರಗ್ಸ್ ಕೇಸ್, ಯುವರಾಜ್ ಸ್ವಾಮಿ ಪ್ರಕರಣದ ತನಿಖೆಯನ್ನು ಅರ್ಧಕ್ಕೆ ಬಿಟ್ಟದೆ. ಸಿಸಿಬಿಯಲ್ಲಿರೋ ಹಿರಿಯ ಅಧಿಕಾರಿಗಳು ಈ ಬಗ್ಗೆ ಕಣ್ಣು ತೆರೆದು ನೋಡಬೇಕು‘ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT