ADVERTISEMENT

ಗುಂಡಿ ಮುಚ್ಚುವ ಯೋಗ್ಯತೆ ಇಲ್ಲದ ಸರ್ಕಾರ: ವಿಜಯೇಂದ್ರ

​ಪ್ರಜಾವಾಣಿ ವಾರ್ತೆ
Published 21 ಫೆಬ್ರುವರಿ 2025, 16:13 IST
Last Updated 21 ಫೆಬ್ರುವರಿ 2025, 16:13 IST
<div class="paragraphs"><p>ವಿಜಯೇಂದ್ರ ಹಾಗೂ ನಂದಿನಿ</p></div>

ವಿಜಯೇಂದ್ರ ಹಾಗೂ ನಂದಿನಿ

   

– ಪ್ರಜಾವಾಣಿ ಚಿತ್ರಗಳು

ಬೆಂಗಳೂರು:‘ಇನ್ನು ಎರಡು–ಮೂರು ವರ್ಷ ಭಗವಂತನೇ ಭೂಮಿಗೆ ಅವತರಿಸಿ ಬಂದರೂ ಬೆಂಗಳೂರು ಉದ್ಧಾರ ಮಾಡಲು ಆಗುವುದಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಇದು ಕಾಂಗ್ರೆಸ್‌ ನೇತೃತ್ವದ ಸರ್ಕಾರದ ಯೋಗ್ಯತೆಗೆ ಹಿಡಿದ ಕನ್ನಡಿ’ ಎಂದು ಬಿ.ಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಕಿಡಿ ಕಾರಿದರು.

ADVERTISEMENT

ಶುಕ್ರವಾರ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ‘ಡಿ.ಕೆ.ಶಿವಕುಮಾರ್ ಮತ್ತು ಕಾಂಗ್ರೆಸ್‌ ಪಕ್ಷದವರು, ಬೆಂಗಳೂರನ್ನು ಸಿಂಗಾಪುರ ಮಾಡುವುದಾಗಿ ಹೇಳಿ ಅಧಿಕಾರಕ್ಕೆ ಬಂದವರು. ಅಂಥ ಸಚಿವರ ಬಾಯಲ್ಲಿ ಬಂದ ಮಾತು ಇದು. ಇವರ ಯೋಗ್ಯತೆಗೆ ಬೆಂಗಳೂರು ಮಹಾನಗರದಲ್ಲಿ ರಸ್ತೆ ಗುಂಡಿಗಳನ್ನು ಮುಚ್ಚಲು ಸಾಧ್ಯ ಆಗುತ್ತಿಲ್ಲ’ ಎಂದು ಅವರು ಹರಿಹಾಯ್ದರು.

‘ಬೆಂಗಳೂರು ನಗರದಲ್ಲಿ ಅಭಿವೃದ್ಧಿ ಆಗುತ್ತಿಲ್ಲ. ಶಾಸಕರಿಗೆ ಅನುದಾನ ಕೊಡುತ್ತಿಲ್ಲ. ಇವರು ಬೆಂಗಳೂರು ಅಭಿವೃದ್ಧಿ ಬಗ್ಗೆ ಮಾತನಾಡುವುದು ದುರಂತ. ಉಪಮುಖ್ಯಮಂತ್ರಿಯವರ ಹೇಳಿಕೆ ನಿಜಕ್ಕೂ ಹಲವರಿಗೆ ಬೇಸರ ತಂದಿದೆ’ ಎಂದರು.

ಬೆಂಗಳೂರು ನಗರ ಒಡೆಯುವುದು ಬೇಡ:

‘ಗ್ರೇಟರ್‌ ಬೆಂಗಳೂರು ರಚಿಸುವ ಮೂಲಕ ಬೆಂಗಳೂರನ್ನು ಒಡೆಯುವ ಕೆಲಸಕ್ಕೆ ಕೈ ಹಾಕಿರುವುದು ಸರಿಯಲ್ಲ. ಆ ಪ್ರಯತ್ನ ಕೈಬಿಡಬೇಕು’ ಎಂದು ವಿಜಯೇಂದ್ರ ಒತ್ತಾಯಿಸಿದರು.

‘ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಬೃಹತ್‌ ಬೆಂಗಳೂರು ಮಹಾನಗರಪಾಲಿಕೆಯನ್ನು ಗ್ರೇಟರ್ ಬೆಂಗಳೂರು ಮಾಡಲು ಹೊರಟಿದ್ದಾರೆ. ಈ ತೀರ್ಮಾನದ ಕುರಿತ ಸಾಧಕ–ಬಾಧಕಗಳ ವಿಷಯದಲ್ಲಿ ನಗರದ ಪ್ರಮುಖರ ಜತೆ ಚರ್ಚೆ ಮಾಡಿದ್ದೇವೆ. ಬೆಂಗಳೂರು ಒಡೆಯುವುದು ನಗರದ ಅಭಿವೃದ್ಧಿ ದೃಷ್ಟಿಯಿಂದಲೂ ಒಳ್ಳೆಯದಲ್ಲ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.