‘ತನ್ನ ಬೆನ್ನಿಗೆ ನಿಲ್ಲುವಂತೆ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ವಿಜಯೇಂದ್ರ ಅವರು ಹಿಂದುಳಿದ ಹಾಗೂ ಪರಿಶಿಷ್ಟ ನಾಯಕರಿಗೆ ಬೆದರಿಕೆ ಹಾಕಿದ್ದಾರೆ. ಅವರ ಜೊತೆಯಲ್ಲಿರುವ ಬಹುತೇಕರು ಹಿಂದುಳಿದ ಸಮುದಾಯದವರೇ ಹೊರತು; ಲಿಂಗಾಯತ, ಒಕ್ಕಲಿಗರು ಯಾರೂ ಇಲ್ಲ. ರಾಜ್ಯಾಧ್ಯಕ್ಷ ಸ್ಥಾನ ನಿಭಾಯಿಸುವ ಸಾಮರ್ಥ್ಯ ವಿಜಯೇಂದ್ರಗೆ ಇಲ್ಲ. ಅವರನ್ನು ಬದಲಾವಣೆ ಮಾಡಲೇಬೇಕು’ ಎಂದು ಶಾಸಕ ರಮೇಶ ಜಾರಕಿಹೊಳಿ ಬೆಳಗಾವಿಯಲ್ಲಿ ಸೋಮವಾರ ಆಗ್ರಹಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.