ADVERTISEMENT

ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ವಿಜಯೇಂದ್ರ ಸ್ಪರ್ಧೆ: ಬಿಎಸ್‌ವೈ

​ಪ್ರಜಾವಾಣಿ ವಾರ್ತೆ
Published 8 ಜೂನ್ 2022, 15:02 IST
Last Updated 8 ಜೂನ್ 2022, 15:02 IST
   

ವಿಜಯಪುರ: ಮುಂಬರುವವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಉಪಾಧ್ಯಕ್ಷರಾದ, ಪುತ್ರ ವಿಜಯೇಂದ್ರ ಸ್ಪರ್ಧಿಸಲಿದ್ದಾರೆ. ಅವರು ರಾಜ್ಯದ ಯಾವುದೇ ಕ್ಷೇತ್ರದಲ್ಲಿ ಸ್ಪರ್ಧಿಸಿದರೂ ಗೆಲ್ಲುವ ವಿಶ್ವಾಸ ತಮಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹೇಳಿದರು.‌

ಪರಿಷತ್‌ ಚುನಾವಣೆಯಲ್ಲಿ ಯಡಿಯೂರಪ್ಪ ಪುತ್ರ ವಿಜಯೇಂದ್ರ ಅವರಿಗೆ ಟಿಕೆಟ್‌ ನೀಡದೇ ಕಡೆಗಣಿಸಲಾಗಿದೆ ಎಂಬ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಹೇಳಿಕೆಗೆನಗರದಲ್ಲಿ ಬುಧವಾರ ಪ್ರತಿಕ್ರಿಯಿಸಿದ ಅವರು, ಒಂದೇ ಕುಟುಂಬದವರಿಗೆ ಟಿಕೆಟ್‌ ಕೊಡಬಾರದು ಎಂಬುದು ಪ್ರಧಾನಿ ಮೋದಿ ಅವರ ತೀರ್ಮಾನ. ಈ ಹಿನ್ನೆಲೆಯಲ್ಲಿ ನೀಡಿಲ್ಲ. ಇದಕ್ಕೆ ಬೇರೆ ಅರ್ಥ ಕಲ್ಪಿಸುವ ಅಗತ್ಯವಿಲ್ಲ ಎಂದರು.

ದೇವರು ಮತ್ತು ನಾಡಿನ ಜನರ ಆಶೀರ್ವಾದ ಇದ್ದರೆ ನಾನು ಇನ್ನೂ 10 ವರ್ಷ ರಾಜಕೀಯದಲ್ಲಿ ಇರುತ್ತೇನೆ. ರಾಜ್ಯದಾದ್ಯಂತ ಓಡಾಡಿ ಪಕ್ಷವನ್ನು ಸಂಘಟಿಸುತ್ತೇನೆ. ಮುಂದಿನ ವಿಧಾನಸಭಾ ಚುನಾವಣೆಯನ್ನು ಸಾಮೂಹಿಕ ನಾಯಕತ್ವದಲ್ಲಿ ಎದುರಿಸಿ, 140 ಸ್ಥಾನಗಳೊಂದಿಗೆ ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರುತ್ತೇವೆ ಎಂದು ಹೇಳಿದರು.

ADVERTISEMENT

ವಿಜಯೇಂದ್ರ ಸಿಎಂ ಆಗಲಿ:

ವಿಜಯೇಂದ್ರ ಮುಖ್ಯಮಂತ್ರಿ ಆಗಲಿ, ಮುಖ್ಯಮಂತ್ರಿ ಮಗ ಮುಖ್ಯಮಂತ್ರಿ ಆದರೆ ತಪ್ಪೇನು ಎಂದು ಸಚಿವ ಮುರುಗೇಶ ನಿರಾಣಿ ಹೇಳಿದರು.

ವಿಜಯೇಂದ್ರಗೆ ನಾಯಕನಾಗುವ ಎಲ್ಲ ಗುಣಲಕ್ಷಣ, ಅರ್ಹತೆ ಇದೆ. ಯಾರ ಹಣೆ ಬರಹದಲ್ಲಿ ಏನು ಬರೆದಿದೆಯೋ ಗೊತ್ತಿಲ್ಲ. ಇದನ್ನು ನಿರ್ಧಾರ ಮಾಡಲು ರಾಜ್ಯ, ರಾಷ್ಟ್ರ ನಾಯಕರಿದ್ದಾರೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.