ADVERTISEMENT

ವಿನಯ್‌ ಕುಲಕರ್ಣಿ ಬಂಧನ | ಸಿಬಿಐ ತನ್ನ ಕೆಲಸ ಮಾಡಿದೆ: ಬಸವರಾಜ ಬೊಮ್ಮಾಯಿ 

​ಪ್ರಜಾವಾಣಿ ವಾರ್ತೆ
Published 5 ನವೆಂಬರ್ 2020, 12:21 IST
Last Updated 5 ನವೆಂಬರ್ 2020, 12:21 IST
   

ಮಡಿಕೇರಿ: ‘ಮಾಜಿ ಸಚಿವ ವಿನಯ್‌ ಕುಲಕರ್ಣಿ ಬಂಧನ ವಿಚಾರವಾಗಿ ನಾನು ಹೆಚ್ಚಿನ ಪ್ರತಿಕ್ರಿಯೆ ನೀಡಲು ಬರುವುದಿಲ್ಲ. ಸಿಬಿಐ ತನ್ನ ಕೆಲಸ ಮಾಡಿದೆ’ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಇಲ್ಲಿ ಗುರುವಾರ ಹೇಳಿದರು.

‘ಮಂಗಳೂರಿನಲ್ಲಿ ನಡೆಯುತ್ತಿರುವ ಬಿಜೆಪಿ ಕಾರ್ಯಕಾರಿಣಿಗೆ ಅಪೇಕ್ಷಿತರಿಗೆ ಮಾತ್ರ ಆಹ್ವಾನವಿದ್ದು, ನಾನು ಭಾಗವಹಿಸಿಲ್ಲ’ ಎಂದು ಪ್ರತಿಕ್ರಿಯಿಸಿದರು.

ವಿಶ್ರಾಂತಿ ಮೊರೆ ಹೋದ ಸಚಿವ:ತಮ್ಮ ಕುಟುಂಬದೊಂದಿಗೆ ಕೊಡಗಿಗೆ ಆಗಮಿಸಿರುವ ಸಚಿವ ಬಸವರಾಜ್‌ ಬೊಮ್ಮಾಯಿ ಅವರು, ಹೊರ ವಲಯದ ತಾಜ್‌ ರೆಸಾರ್ಟ್‌ನಲ್ಲಿ ಎರಡು ದಿನಗಳ ಕಾಲ ವಿಶ್ರಾಂತಿ ಪಡೆಯಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ರೆಸಾರ್ಟ್‌ ಸುತ್ತಮುತ್ತ ಹೆಚ್ಚಿನ ಭದ್ರತೆ ಕಲ್ಪಿಸಲಾಗಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.