ಬೆಂಗಳೂರು: ‘ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ ಅಡಿಯಲ್ಲಿ ಶಾಸಕ ವಿನಯ ಕುಲಕರ್ಣಿ ಅವರಿಗೆ ಜಾರಿ ನಿರ್ದೇಶನಾಲಯ (ಇ.ಡಿ) ನೀಡಿರುವ ಸಮನ್ಸ್‌ಗೆ ಸಂಬಂಧಿಸಿದಂತೆ ಯಾವುದೇ ಬಲವಂತದ ಕ್ರಮ ಕೈಗೊಳ್ಳಬಾರದು’ ಎಂದು ಹೈಕೋರ್ಟ್ ಇ.ಡಿಗೆ ಆದೇಶಿಸಿದೆ.
‘ಇ.ಡಿ ಜಾರಿಗೊಳಿಸಿರುವ ಸಮನ್ಸ್ ರದ್ದುಪಡಿಸಬೇಕು’ ಎಂದು ಕೋರಿ ವಿನಯ ಕುಲಕರ್ಣಿ ಸಲ್ಲಿಸಿರುವ ರಿಟ್ ಅರ್ಜಿಯನ್ನು ನ್ಯಾಯಮೂರ್ತಿ ಶಿವಶಂಕರ ಅಮರಣ್ಣವರ ಅವರಿದ್ದ ರಜಾಕಾಲದ ಏಕಸದಸ್ಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು.
ಮಧ್ಯಂತರ ಆದೇಶಕ್ಕೆ ಸಂಬಂಧಿಸಿದಂತೆ ಇ.ಡಿ ಆಕ್ಷೇಪಣೆ ಪರಿಗಣಿಸಲು ನಿರಾಕರಿಸಿದ ನ್ಯಾಯಪೀಠ ವಿನಯ ಕುಲಕರ್ಣಿ ವಿರುದ್ಧ ಬಲವಂತದ ಕ್ರಮ ಜರುಗಿಸದಂತೆ ಇ.ಡಿಗೆ ನಿರ್ದೇಶಿಸಿ ವಿಚಾರಣೆ ಮುಂದೂಡಿತು.
‘ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ವಂಚಿಸಿದ ಆರೋಪದಡಿ ಐಶ್ವರ್ಯಾ ಗೌಡ ಅಲಿಯಾಸ್ ನವ್ಯಶ್ರೀ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣದಲ್ಲಿ ವಿನಯ ಕುಲಕರ್ಣಿ ಅವರಿಗೂ ಇ.ಡಿ ಸಮನ್ಸ್ ಜಾರಿಗೊಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.