ADVERTISEMENT

ವಿನಯ್‌ ಸೋಮಯ್ಯ ಆತ್ಮಹತ್ಯೆ: ಪೊನ್ನಣ್ಣ, ಮಂಥರ್‌ಗೌಡ ಹೆಸರು ಕೈಬಿಟ್ಟು ಕೇಸ್ ದಾಖಲು

ಬಿಜೆಪಿ ಆಕ್ರೋಶ

​ಪ್ರಜಾವಾಣಿ ವಾರ್ತೆ
Published 4 ಏಪ್ರಿಲ್ 2025, 10:54 IST
Last Updated 4 ಏಪ್ರಿಲ್ 2025, 10:54 IST
<div class="paragraphs"><p>ಪೊನ್ನಣ್ಣ,&nbsp;ಮಂಥರ್‌ಗೌಡ,&nbsp;ತನ್ನೀರಾ ಮೈನಾ,&nbsp;ವಿನಯ್‌ ಸೋಮಯ್ಯ</p></div>

ಪೊನ್ನಣ್ಣ, ಮಂಥರ್‌ಗೌಡ, ತನ್ನೀರಾ ಮೈನಾ, ವಿನಯ್‌ ಸೋಮಯ್ಯ

   

ಬೆಂಗಳೂರು: ಕೊಡಗು ಜಿಲ್ಲೆಯ ಬಿಜೆಪಿ ಕಾರ್ಯಕರ್ತ ವಿನಯ್‌ ಸೋಮಯ್ಯ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜೀವ್‌ ಗಾಂಧಿ ಪಂಚಾಯತ್‌ರಾಜ್‌ ಸಂಘಟನೆಯ ಕೊಡಗು ಜಿಲ್ಲಾ ಅಧ್ಯಕ್ಷ, ಕಾಂಗ್ರೆಸ್‌ ಮುಖಂಡ ತನ್ನೀರಾ ಮೈನಾ ಅವರ ವಿರುದ್ಧ ಹೆಣ್ಣೂರು ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ವಿರಾಜಪೇಟೆ ಕ್ಷೇತ್ರ ಕಾಂಗ್ರೆಸ್‌ ಶಾಸಕ, ಮುಖ್ಯಮಂತ್ರಿಯವರ ಕಾನೂನು ಸಲಹೆಗಾರ ಎ.ಎಸ್‌.ಪೊನ್ನಣ್ಣ ಹಾಗೂ ಮಡಿಕೇರಿ ಕ್ಷೇತ್ರದ ಕಾಂಗ್ರೆಸ್‌ ಶಾಸಕ ಮಂಥರ್‌ಗೌಡ ಅವರ ಹೆಸರನ್ನೂ ಎಫ್‌ಐಆರ್‌ನಲ್ಲಿ ಉಲ್ಲೇಖಿಸಬೇಕು ಎಂದು ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಆಸ್ಪತ್ರೆಯ ಎದುರು ವಿಧಾನ ಪರಿಷತ್‌ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿದೆ.

ADVERTISEMENT

ತನ್ನೀರಾ ಮೈನಾ ವಿರುದ್ಧ ಬಿಎನ್‌ಎಸ್‌ ಸೆಕ್ಷನ್‌ 108 (ಆತ್ಮಹತ್ಯೆಗೆ ಪ್ರಚೋದನೆ), ಸೆಕ್ಷನ್‌ 3(5) (ಅಪರಾಧಿಕ ಸಂಚು), 351 (ಬೆದರಿಕೆ) ಹಾಗೂ 352ರ (ಉದ್ದೇಶ ಪೂರ್ವಕವಾಗಿ ಅವಮಾನ) ಅಡಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.