ಆಸ್ಪತ್ರೆಗೆ ಆರ್ ಅಶೋಕ್ ಭೇಟಿ
ಬೆಂಗಳೂರು: ‘ವಿನಯ್ ಸೋಮಯ್ಯ ಅವರ ಆತ್ಮಹತ್ಯೆ ಪ್ರಕರಣದಲ್ಲಿ ಕೊಡಗು ಎಸ್.ಪಿ. ನೇರ ಹೊಣೆ ಎಂಬುದು ಗೊತ್ತಾಗಿದೆ. ಎಸ್‍ಪಿಯವರನ್ನು ಅಮಾನತು ಮಾಡಬೇಕು. ಪ್ರಕರಣದಲ್ಲಿ ಒಳಗೊಂಡ ಆರೋಪಿತರಾದ ಶಾಸಕರಾದ ಪೊನ್ನಣ್ಣ, ಮಂಥರ್ ಗೌಡ, ಆರೋಪಿತ ತನ್ನೀರ್ ಮೈನಾ ಅವರನ್ನು ಎಫ್‍ಐಆರ್‌ನಲ್ಕಿ ಸೇರಿಸಿ ತನಿಖೆ ನಡೆಸಬೇಕು. ಅವರನ್ನು ಬಂಧಿಸಬೇಕು’ ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಆಗ್ರಹಿಸಿದ್ದಾರೆ.
ಬೆಂಗಳೂರಿನ ಬಿ.ಆರ್.ಅಂಬೇಡ್ಕರ್ ಆಸ್ಪತ್ರೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಅವರು ಮಾಧ್ಯಮಗಳ ಜೊತೆ ಮಾತನಾಡಿದರು.
‘ಆತ್ಮಹತ್ಯೆ ಹಿಂದೆ ಶಾಸಕ ಪೊನ್ನಣ್ಣನವರು ಇದ್ದಾರೆ ಎಂದು ವಿನಯ್ ಸೋಮಯ್ಯ ಡೆತ್ ನೋಟಿನಲ್ಲಿ ಬರೆದುಕೊಂಡಿದ್ದಾರೆ’ ಎಂದು ತಿಳಿಸಿದರು. ‘ತಡಮಾಡದೇ ಈ ಕೇಸನ್ನು ಸಿಬಿಐಗೆ ಕೊಡಿ’ ಆಗ್ರಹಿಸಿದರು.
ಪ್ರಕರಣದಲ್ಲಿ ಪೊಲೀಸರು ನೇರವಾಗಿ ಭಾಗವಹಿಸಿದ್ದಾರೆ. ಜಾಮೀನು ಪಡೆದರೂ ಯಾಕೆ ಅವರನ್ನು ಹುಡುಕುತ್ತಿದ್ದರು? ಅವರೇನು ರೌಡಿಯೇ? ಎಂದು ಪ್ರಶ್ನಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.