ADVERTISEMENT

ನೀತಿ ಸಂಹಿತೆ ಉಲ್ಲಂಘನೆ ಆರೋಪ: ಹೈಕೋರ್ಟ್‌ ಮೆಟ್ಟಿಲೇರಿದ ಹೆಬ್ಬಾಳ್ಕರ್‌

​ಪ್ರಜಾವಾಣಿ ವಾರ್ತೆ
Published 17 ಜನವರಿ 2019, 19:35 IST
Last Updated 17 ಜನವರಿ 2019, 19:35 IST
   

ಬೆಂಗಳೂರು: ‘ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರಕ್ಕೆ 2017ರಲ್ಲಿ ನಡೆದ ಉಪ ಚುನಾವಣೆ ಪ್ರಚಾರದ ವೇಳೆ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಗುಂಡ್ಲುಪೇಟೆ ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ನನ್ನ ವಿರುದ್ಧ ನಡೆಯುತ್ತಿರುವ ವಿಚಾರಣೆಯನ್ನು ರದ್ದುಗೊಳಿಸಬೇಕು’ ಎಂದುಕೋರಿ ಕಾಂಗ್ರೆಸ್ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಹೈಕೋರ್ಟ್ಮೆಟ್ಟಿಲೇರಿದ್ದಾರೆ.

ಈ ಅರ್ಜಿ ಇನ್ನೂ ವಿಚಾರಣೆಗೆ ಬರಬೇಕಿದೆ.

‘ಚುನಾವಣಾ ಪ್ರಚಾರದ ಸಂದರ್ಭದಲ್ಲಿ 2017ರ ಏಪ್ರಿಲ್‌ 6ರಂದು ಕಾಂಗ್ರೆಸ್ ಅಭ್ಯರ್ಥಿ ಪರ ಮತ ಯಾಚನೆ ವೇಳೆ ಗುಂಡ್ಲುಪೇಟೆಯ ಅಣ್ಣೂರುಕೇರಿ ಗ್ರಾಮದಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್ ಮತದಾರರಿಗೆ ಹಣದ ಆಮಿಷ ಒಡ್ಡುತ್ತಿದ್ದಾರೆ’ ಎಂದು ಆರೋಪಿಸಿ ಬಿಜೆಪಿಯ ವೈ.ಎನ್. ಅಭಿಷೇಕ್ ಕುಮಾರ್ ಅವರು ಚುನಾವಣಾ ಅಧಿಕಾರಿಗಳಿಗೆ ದೂರು ಸಲ್ಲಿಸಿದ್ದರು.

ADVERTISEMENT

ಈ ದೂರಿನ ಅನ್ವಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ಅಂತೆಯೇ ಜುಲೈ 8ರಂದು ಗುಂಡ್ಲುಪೇಟೆ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.