ADVERTISEMENT

ಆಶಾ ಕಾರ್ಯಕರ್ತೆಯರ ಮೇಲೆ ದೌರ್ಜನ್ಯ: ದಾಖಲೆ ಕಸಿದುಕೊಂಡು ಕರ್ತವ್ಯಕ್ಕೆ ಅಡ್ಡಿ

​ಪ್ರಜಾವಾಣಿ ವಾರ್ತೆ
Published 10 ಏಪ್ರಿಲ್ 2020, 10:53 IST
Last Updated 10 ಏಪ್ರಿಲ್ 2020, 10:53 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಹುಬ್ಬಳ್ಳಿ: ಕೊರೊನಾ ವೈರಸ್ ಮುಂಜಾಗ್ರತಾ ಕ್ರಮವಾಗಿ ಸರ್ವೆ ಕಾರ್ಯ ಮಾಡುತಿದ್ದ ಆಶಾ ಕಾರ್ಯಕರ್ತರ ಕೈಯಲ್ಲಿರುವ ಕಡತಗಳನ್ನು ಕಸಿದುಕೊಂಡು ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಘಟನೆ ಹುಬ್ಬಳ್ಳಿಯ ಗೌಳಿ ಗಲ್ಲಿಯಲ್ಲಿ ನಡೆದಿದೆ.

ಜಿಲ್ಲಾಡಳಿತದ ಆದೇಶದ ಮೇರೆಗೆ ಹಾಗೂ ಆರೋಗ್ಯ ಇಲಾಖೆಯ ನಿರ್ದೇಶನದ ಮೇರೆಗೆ ಸರ್ವೆ ಮಾಡಲು ಹೋಗಿದ್ದ ಆಶಾ ಕಾರ್ಯಕರ್ತೆಯರಿಗೆ ಗೌಳಿ ಗಲ್ಲಿಯ ಕೆಲವರು ಕರ್ತವ್ಯಕ್ಕೆ ಅಡ್ಡಿ ಪಡಿಸಿ ದಾಖಲೆಗಳನ್ನು ಕಸಿದುಕೊಂಡು ಅನುಚಿತವಾಗಿ ವರ್ತನೆ ಮಾಡಿದ್ದಾರೆ. ನಾಗವೇಣಿ ಪಾನಗಲ್, ಲತಾ ಶ್ರೀರಾಮ ಎಂಬ ಆಶಾ ಕಾರ್ಯಕರ್ತೆಯರ ಮೇಲೆ ದೌರ್ಜನ್ಯ ನಡೆದಿದೆ.

ಸರ್ವೆ ಮಾಡುತಿದ್ದ ವೇಳೆ ಕಡತಗಳನ್ನು ಕಸಿದುಕೊಂಡು ನಮ್ಮ ಜಮಾತದಲ್ಲಿ ಯಾವುದೇ ಮಾಹಿತಿಯಿಲ್ಲ ಎಂದು ಕರ್ತವ್ಯಕ್ಕೆ ಅಡ್ಡಿ ಪಡಿಸಿದ್ದಾರೆ.

ADVERTISEMENT

ಸ್ಥಳಕ್ಕೆ ಶಹರ ಪೊಲೀಸ್‌ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಬಂದು, ಕರ್ತವ್ಯಕ್ಕೆ ಅಡ್ಡಿಪಡಿಸಿದ ವ್ಯಕ್ತಿಯನ್ನು ವಶಕ್ಕೆ ಪಡೆದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.