ADVERTISEMENT

ನ.23ರಿಂದ ದುಬೈನಲ್ಲಿ ವಿ‌ಶ್ವ ತುಳು ಸಮ್ಮೇಳನ

​ಪ್ರಜಾವಾಣಿ ವಾರ್ತೆ
Published 10 ಸೆಪ್ಟೆಂಬರ್ 2018, 10:53 IST
Last Updated 10 ಸೆಪ್ಟೆಂಬರ್ 2018, 10:53 IST
   

ಬೆಂಗಳೂರು: ಈ ಬಾರಿಯ ವಿಶ್ವ ತುಳು ಸಮ್ಮೇಳನ ನವೆಂಬರ್‌ 23 ಹಾಗೂ 24ರಂದು ದುಬೈನಲ್ಲಿ ನಡೆಯಲಿದೆ.

ನಗರದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತಾನಾಡಿದ ಅಖಿಲ ಭಾರತ ತುಳು ಒಕ್ಕೂಟದ ರಾಜ್ಯ ಘಟಕದ ಅಧ್ಯಕ್ಷ ಧರ್ಮಪಾಲ ದೇವಾಡಿಗ, ‘ಕೊಲ್ಲಿ ರಾಷ್ಟ್ರದ ತುಳು ಭಾಷಿಕರನ್ನು ಒಗ್ಗೂಡಿಸುವ ಉದ್ದೇಶದಿಂದ ಈ ಬಾರಿದುಬೈನ ಆಲ್‌ನಸಾರ್‌ ಲೀಸರ್‌ ಲ್ಯಾಂಡ್‌ ಐಸ್‌ರಿಂಗ್‌ ಸಭಾಂಗಣದಲ್ಲಿ ಸಮ್ಮೇಳನ ನಡೆಸಲು ನಿರ್ಧರಿಸಲಾಗಿದೆ’ ಎಂದು ಹೇಳಿದರು.

‘ತುಳು ಭಾಷೆಯನ್ನು ಸಂವಿಧಾನದ 8ನೇ ಪರಿಚ್ಛೇದಕ್ಕೆ ಸೇರಿಸುವಂತೆ ಸರ್ಕಾರವನ್ನು ಒತ್ತಾಯಿಸುವ ಉದ್ದೇಶವೂ ಇದೆ. ದುಬೈನ ಡಾ.ಬಿ.ಆರ್‌.ಶೆಟ್ಟಿ ಸಮ್ಮೇಳನದ ಅಧ್ಯಕ್ಷತೆ ವಹಿಸಲಿದ್ದು, ಅತಿಥಿಯಾಗಿ ವೀರೇಂದ್ರ ಹೆಗ್ಗಡೆ ಪಾಲ್ಗೊಳ್ಳಲಿದ್ದಾರೆ’ ಎಂದರು.

ADVERTISEMENT

‘ಮಂಗಳೂರಿನ ವಿವಿಧ ಜಾನಪದ ಕಲಾ ತಂಡಗಳು ಭಾಗವಹಿಸಲಿವೆ. ಅವರಿಗೆ ಊಟ–ವಸತಿ ವ್ಯವಸ್ಥೆ ಕಲ್ಪಿಸಲಾಗುವುದು. ವಿವಿಧ ರಾಜ್ಯಗಳಿಂದ ತುಳು ಭಾಷಿಕರು ಬರಲಿದ್ದಾರೆ’ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.