ಪೇಜಾವರದ ವಿಶ್ವೇಶತೀರ್ಥ ಶ್ರೀಗಳಿಗೆ ಕೇಂದ್ರ ಸರ್ಕಾರವು ಮರಣೋತ್ತರ ಪದ್ಮವಿಭೂಷಣ ಪ್ರಶಸ್ತಿ ಘೋಷಿಸಿದೆ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ತಿಳಿಸಿದ್ದಾರೆ.
ಈ ಕುರಿತು ಭಾನುವಾರ ಬೆಳಿಗ್ಗೆ ಟ್ವೀಟ್ ಮಾಡಿರುವ ಅವರು, 'ಪರಮಪೂಜ್ಯ ಉಡುಪಿ ಅಧೋಕ್ಷಜ ಮಠದ ಪೀಠಾಧಿಪತಿಗಳಾಗಿ ನಮ್ಮೆಲ್ಲರಿಗೂ ಹಲವಾರು ವರ್ಷಗಳ ಕಾಲ ನಿರಂತರ ಮಾರ್ಗದರ್ಶನ ಮಾಡಿದ್ದ ಶ್ರೀ ವಿಶ್ವೇಶತೀರ್ಥ ಶ್ರೀಪಾದರಿಗೆ ಭಾರತ ಸರ್ಕಾರ ಮರಣೋತ್ತರ ಪದ್ಮವಿಭೂಷಣ ಪ್ರಶಸ್ತಿ ಘೋಷಿಸಿದೆ. ಇದು ಕನ್ನಡಿಗರಾದ ನಮ್ಮೆಲ್ಲರಿಗೂ ಹೆಮ್ಮೆಯ ವಿಷಯ' ಎಂದು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.