
ಭದ್ರಾವತಿ (ಶಿವಮೊಗ್ಗ): ಇಲ್ಲಿನ ವಿಶ್ವೇಶರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಯ ಪುನಶ್ಚೇತನಕ್ಕೆ ₹ 5,000 ಕೋಟಿ ಅನುದಾನ ನೀಡಲು ಭಾರತೀಯ ಉಕ್ಕು ಪ್ರಾಧಿಕಾರ (ಎಸ್‌ಎಐಎಲ್) ನಿರ್ಧರಿಸಿದೆ. ಕಾರ್ಖಾನೆಯ ಪುನಶ್ಚೇತನಕ್ಕೆ ಪ್ರಧಾನಿ ನರೇಂದ್ರ ಮೋದಿ ಕೂಡ ಒಪ್ಪಿಗೆ ಸೂಚಿಸಿದ್ದಾರೆ ಎಂದು ಕೇಂದ್ರ ಉಕ್ಕು, ಬೃಹತ್ ಕೈಗಾರಿಕೆ ಸಚಿವ ಎಚ್.ಡಿ. ಕುಮಾರಸ್ವಾಮಿ ಘೋಷಿಸಿದರು.
ಭದ್ರಾವತಿಯಲ್ಲಿ ಶನಿವಾರ ಆರಂಭವಾದ ತರಳಬಾಳು ಹುಣ್ಣಿಮೆ ಮಹೋತ್ಸವದಲ್ಲಿ ಮಾತನಾಡಿದ ಅವರು, ‘ಎರಡೂವರೆ ತಿಂಗಳಲ್ಲಿ ಕಾರ್ಖಾನೆಗೆ ದೊಡ್ಡಮಟ್ಟದ ಕಾಯಕಲ್ಪ ನೀಡಲಿದ್ದೇವೆ. ಇದರಲ್ಲಿ ಯಾವುದೇ ಸಂಶಯ ಬೇಡ’ ಎಂದು ಭರವಸೆ ನೀಡಿದರು.
ವಿಐಎಸ್‌ಎಲ್ ಪುನಶ್ಚೇತನ ಕುರಿತು ಭಾರತೀಯ ಉಕ್ಕು ಪ್ರಾಧಿಕಾರ ಕೈಗೊಂಡಿರುವ ನಿರ್ಧಾರಕ್ಕೆ ಕೇಂದ್ರ ಹಣಕಾಸು ಸಚಿವರ ಸಹಿ ಮಾತ್ರ ಬಾಕಿ ಇದೆ ಎಂದರು.
‘ಸಿರಿಗೆರೆ ಮಠದಿಂದ ₹5 ಕೋಟಿ’: ಭದ್ರಾವತಿಯ ವಿಐಎಸ್‌ಎಲ್ ಕಾರ್ಖಾನೆಯ ಪುನಃಶ್ಚೇತನಕ್ಕೆ ಪುನಶ್ಚೇತನ ಕಾರ್ಯಕ್ಕೆ ಸಿರಿಗೆರೆ ಮಠದಿಂದಲೂ ₹5 ಕೋಟಿ ಕೊಡುವುದಾಗಿ ಸಿರಿಗೆರೆಯ ತರಳಬಾಳು ಮಠದ ಶಿವಾಚಾರ್ಯ ಸ್ವಾಮೀಜಿ ವಾಗ್ದಾನ ಮಾಡಿದರು.
ತರಳಬಾಳು ಹುಣ್ಣಿಮೆ ಮಹೋತ್ಸವದಲ್ಲಿ ಕಾಣಿಕೆ ಸಂಗ್ರಹವಾಗಿ ಉಳಿದ ಹಣ ಹಾಗೂ ಮಠದಿಂದ ಅದಕ್ಕೆ ಇನ್ನಷ್ಟು ಹಣ ಸೇರಿಸಿ ಕೊಡುವುದಾಗಿ ಹೇಳಿದರು.
ಇದೇ ವೇಳೆ, ಮುಂಬರುವ ಕೇಂದ್ರ ಬಜೆಟ್‌ನಲ್ಲಿ ಕಾರ್ಖಾನೆ ಪುನಶ್ಚೇತನಕ್ಕೆ ಅಗತ್ಯ ಹಣಕಾಸು ವ್ಯವಸ್ಥೆ ಮಾಡುವಂತೆ ಕುಮಾರಸ್ವಾಮಿಯವರಿಗೆ ಸ್ವಾಮೀಜಿ ಸಲಹೆ ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.