ADVERTISEMENT

ಆಂಧ್ರದ ವಿಐಟಿಯಿಂದ ವಿದ್ಯಾರ್ಥಿವೇತನ ಸೌಲಭ್ಯ

​ಪ್ರಜಾವಾಣಿ ವಾರ್ತೆ
Published 25 ಫೆಬ್ರುವರಿ 2021, 23:29 IST
Last Updated 25 ಫೆಬ್ರುವರಿ 2021, 23:29 IST

ಬೆಂಗಳೂರು: ಪದವಿ ಕೋರ್ಸ್‌ಗಳ ವಿದ್ಯಾರ್ಥಿಗಳಿಗೆ ಆಂಧ್ರಪ್ರದೇಶದ ವೆಲ್ಲೋರ್‌ ತಾಂತ್ರಿಕ ವಿಶ್ವವಿದ್ಯಾಲಯ (ವಿಐಟಿ) ವಿದ್ಯಾರ್ಥಿ ವೇತನ ನೀಡುವುದಾಗಿ ಘೋಷಿಸಿದೆ.

‘ಬಿಬಿಎ, ಕಾನೂನು, ಬಿ.ಕಾಂ, ಬಿಎಸ್‌ಸಿ ಹಾಗೂ ಬಿಎ ಕೋರ್ಸ್‌ಗಳಿಗೆ ಪ್ರವೇಶ ಪಡೆಯುವ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಜಿವಿ ಮತ್ತು ರಾಜೇಶ್ವರಿ ಅಮ್ಮಾಳ್‌ ಹೆಸರಿನಲ್ಲಿ ವಿದ್ಯಾರ್ಥಿ ವೇತನ ನೀಡಲಾಗುವುದು’ ಎಂದು ವಿಐಟಿಯ ಉಪಾಧ್ಯಕ್ಷ ಡಾ. ಶೇಖರ್ ವಿಶ್ವನಾಥನ್ ಹೇಳಿದ್ದಾರೆ.

‘ಸಂಬಂಧಿಸಿದ ಕೋರ್ಸ್‌ನಲ್ಲಿ ಪಿಯುಸಿ ಪರೀಕ್ಷೆಯಲ್ಲಿ ದೇಶಕ್ಕೇ ಪ್ರಥಮ ಸ್ಥಾನ ಬಂದ ವಿದ್ಯಾರ್ಥಿಗಳಿಗೆ ಜಿವಿ ವಿದ್ಯಾರ್ಥಿವೇತನ ನೀಡಲಾಗುವುದು. ಆಯ್ಕೆಯಾದ ವಿದ್ಯಾರ್ಥಿಗಳಿಗೆ ಈ ಸ್ಕಾಲರ್‌ಶಿಪ್‌ ಅಡಿ ಪದವಿಯ ಎಲ್ಲ ವರ್ಷಗಳ ಶುಲ್ಕ ಭರಿಸಲಾಗುವುದು’ ಎಂದು ವಿಶ್ವವಿದ್ಯಾಲಯದ ಕುಲಪತಿ ಡಾ.ಎಸ್.ವಿ. ಕೋಟಾ ರೆಡ್ಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ADVERTISEMENT

‘ರಾಜೇಶ್ವರಿ ಅಮ್ಮಾಳ್‌ ಸ್ಕಾಲರ್‌ಶಿಪ್‌ ಪಡೆಯಲು, ಯಾವುದೇ ರಾಜ್ಯದಲ್ಲಿ ಆಯಾ ಜಿಲ್ಲೆಯಲ್ಲಿ ದ್ವಿತೀಯ ಪಿಯು ಪರೀಕ್ಷೆಯಲ್ಲಿ ಮೊದಲ ಸ್ಥಾನ ಪಡೆದಿರಬೇಕು. ಇಂತಹ ವಿದ್ಯಾರ್ಥಿಗಳಿಗೆ ಪದವಿಯ ಎಲ್ಲ ವರ್ಷಗಳಲ್ಲಿ ಬೋಧನಾ ಶುಲ್ಕದಲ್ಲಿ ಶೇ 50ರಷ್ಟು ರಿಯಾಯಿತಿ ನೀಡಲಾಗುತ್ತದೆ. ಜಿಲ್ಲೆಯಲ್ಲಿ ಮೊದಲ ಸ್ಥಾನವನ್ನು ಯುವತಿ ಪಡೆದಿದ್ದರೆ ಅವರಿಗೆ ಶೇ 75ರಷ್ಟು ರಿಯಾಯಿತಿ ನೀಡಲಾಗುತ್ತದೆ’ ಎಂದು ಅವರು ತಿಳಿಸಿದರು.

ಅರ್ಜಿ ಸಲ್ಲಿಕೆ ಪ್ರಕ್ರಿಯೆ ಈಗಾಗಲೇ ಆರಂಭವಾಗಿದ್ದು, ಮೇ 31 ಕೊನೆಯ ದಿನ. ಮಾಹಿತಿಗೆ, www.vitap.ac.in ಅಥವಾ ಇ ಮೇಲ್ ವಿಳಾಸ– admission@vitap.ac.in, ದೂರವಾಣಿ ಸಂಖ್ಯೆ 7901091283 ಸಂಪರ್ಕಿಸಬಹುದು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.