ADVERTISEMENT

ಭಕ್ತರ ಅನುಪಸ್ಥಿತಿಯಲ್ಲಿ ವಿಟ್ಲಪಿಂಡಿ ಉತ್ಸವ

​ಪ್ರಜಾವಾಣಿ ವಾರ್ತೆ
Published 11 ಸೆಪ್ಟೆಂಬರ್ 2020, 16:52 IST
Last Updated 11 ಸೆಪ್ಟೆಂಬರ್ 2020, 16:52 IST
ಉಡುಪಿಯ ಕೃಷ್ಣಮಠದ ರಥಬೀದಿಯಲ್ಲಿ ಶುಕ್ರವಾರ ಕೃಷ್ಣನಿಗೆ ಪೂಜೆ ಸಲ್ಲಿಸುವ ಮೂಲಕ ಅದಮಾರು ಮಠದ ಈಶಪ್ರಿಯ ತೀರ್ಥ ಸ್ವಾಮೀಜಿ ವಿಟ್ಲಪಿಂಡಿ ಮಹೋತ್ಸವಕ್ಕೆ ಚಾಲನೆ ನೀಡಿದರು
ಉಡುಪಿಯ ಕೃಷ್ಣಮಠದ ರಥಬೀದಿಯಲ್ಲಿ ಶುಕ್ರವಾರ ಕೃಷ್ಣನಿಗೆ ಪೂಜೆ ಸಲ್ಲಿಸುವ ಮೂಲಕ ಅದಮಾರು ಮಠದ ಈಶಪ್ರಿಯ ತೀರ್ಥ ಸ್ವಾಮೀಜಿ ವಿಟ್ಲಪಿಂಡಿ ಮಹೋತ್ಸವಕ್ಕೆ ಚಾಲನೆ ನೀಡಿದರು   

ಉಡುಪಿ: ಭಕ್ತರ ಅನುಪಸ್ಥಿತಿಯಲ್ಲಿ ಹಾಗೂ ಪೊಲೀಸರ ಸರ್ಪಗಾವಲಿನಲ್ಲಿ ಇದೇ ಮೊದಲ ಬಾರಿಗೆ ಕೃಷ್ಣಮಠದ ರಥಬೀದಿಯಲ್ಲಿ ಶುಕ್ರವಾರ ವಿಟ್ಲಪಿಂಡಿ ಮಹೋತ್ಸವ ನೆರವೇರಿತು.

ಮಧ್ಯಾಹ್ನ 3.30ರ ಹೊತ್ತಿಗೆ ರಥಬೀದಿಗೆ ಆಗಮಿಸಿದ ಪರ್ಯಾಯ ಅದಮಾರು ಮಠದ ಈಶಪ್ರಿಯ ತೀರ್ಥ ಸ್ವಾಮೀಜಿ, ಚಿನ್ನದ ರಥದಲ್ಲಿ ಕೃಷ್ಣನ ಮಣ್ಣಿನ ಮೂರ್ತಿಯನ್ನು ಪ್ರತಿಷ್ಠಾಪಿಸಿ ಪೂಜೆ ಸಲ್ಲಿಸಿ, ರಥೋತ್ಸವಕ್ಕೆ ಚಾಲನೆ ನೀಡಿದರು.

ಕನಕ ನವರತ್ನ ರಥದಲ್ಲಿ ಅನಂತೇಶ್ವರ ಹಾಗೂ ಚಂದ್ರಮೌಳೇಶ್ವರನ ಮೂರ್ತಿಗಳನ್ನು ಇಡಲಾಗಿತ್ತು. ಎರಡೂ ರಥಗಳುರಥಬೀದಿಯ ಸುತ್ತ ಮೆರವಣಿಗೆಯಲ್ಲಿ ಸಾಗಿದವು.

ADVERTISEMENT

ರಥ ಸಾಗಿ ಬರುವ ಮಾರ್ಗದಲ್ಲಿ 14 ಗುರ್ಜಿಗಳಲ್ಲಿ ಕಟ್ಟಲಾಗಿದ್ದ ಮೊಸರಿನ ಕುಡಿಕೆಗಳನ್ನು ಗೊಲ್ಲ ವೇಷಧಾರಿಗಳು ಒಡೆದು ಸಂಭ್ರಮಿಸಿದರು. ಅಂತಿಮವಾಗಿ ಕೃಷ್ಣನ ಮಣ್ಣಿನ ಮೂರ್ತಿಯನ್ನು ಮಧ್ವ ಸರೋವರದಲ್ಲಿ ವಿಸರ್ಜಿಸುವ ಮೂಲಕ ವಿಟ್ಲಪಿಂಡಿ ಉತ್ಸವಕ್ಕೆ ತೆರೆಬಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.