ADVERTISEMENT

ವಿಕೆ ಶಶಿಕಲಾ ಆಸ್ಪತ್ರೆಯಿಂದ ಬಿಡುಗಡೆ

​ಪ್ರಜಾವಾಣಿ ವಾರ್ತೆ
Published 31 ಜನವರಿ 2021, 14:02 IST
Last Updated 31 ಜನವರಿ 2021, 14:02 IST
 ವಿ.ಕೆ. ಶಶಿಕಲಾ
ವಿ.ಕೆ. ಶಶಿಕಲಾ   

ಬೆಂಗಳೂರು: ಕೊರೊನಾ ಸೋಂಕು ತಗುಲಿದ್ದರಿಂದ ಚಿಕಿತ್ಸೆ ಪಡೆಯುತ್ತಿದ್ದ ತಮಿಳುನಾಡಿನ ಎಐಎಡಿಎಂಕೆ ಪಕ್ಷದ ನಾಯಕಿ ವಿ.ಕೆ. ಶಶಿಕಲಾ, ವಿಕ್ಟೋರಿಯಾ ಆಸ್ಪತ್ರೆಯಿಂದ ಭಾನುವಾರ ಬೆಳಿಗ್ಗೆ ಬಿಡುಗಡೆ ಆಗಿದ್ದಾರೆ.

ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಜೈಲು ಶಿಕ್ಷೆ ಅನುಭವಿಸಿದ್ದ ಶಶಿಕಲಾ ಹಾಗೂ ಇತರರು, ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದರು.

ಇತ್ತೀಚೆಗಷ್ಟೇ ಶಶಿಕಲಾಗೆ ಕೊರೊನಾ ಸೋಂಕು ತಗುಲಿತ್ತು. ಹೀಗಾಗಿ, ಚಿಕಿತ್ಸೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ADVERTISEMENT

ಶಿಕ್ಷೆ ಅವಧಿ ಮುಗಿದಿದ್ದರಿಂದ ಇತ್ತೀಚೆಗಷ್ಟೇ ‌ಶಶಿಕಲಾ‌ ಜೈಲಿನಿಂದ ಜ. 27ರಂದು ಬಿಡುಗಡೆ ಆಗಿದ್ದರು. ಆದರೆ, ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿತ್ತು.

ಚಿಕಿತ್ಸೆ ಪಡೆದು ಚೇತರಿಸಿಕೊಂಡಿದ್ದ ಶಶಿಕಲಾ ಬಿಡುಗಡೆಗೆ ವೈದ್ಯರು ಅನುಮತಿ ನೀಡಿದ್ದರು. ಅದರಂತೆ ಭಾನುವಾರ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ.

ಬೆಳಿಗ್ಗೆ ಆಸ್ಪತ್ರೆಗೆ ಬಂದಿದ್ದ ಕುಟುಂಬದವರು ಹಾಗೂ ಸಂಬಂಧಿಕರು, ತಮ್ಮ ಕಾರಿನಲ್ಲೇ ಶಶಿಕಲಾ ಕರೆದೊಯ್ದರು.

10 ಜನ ಖಾಸಗಿ ಭದ್ರತಾ ಸಿಬ್ಬಂದಿ ಸ್ಥಳಕ್ಕೆ ಬಂದಿದ್ದರು. ಅವರ ಭದ್ರತೆಯಲ್ಲೇ ಶಶಿಕಲಾ, ಆಸ್ಪತ್ರೆಯಿಂದ ಹೋದರು.

ಆಸ್ಪತ್ರೆ ಸುತ್ತಲೂ 300ಕ್ಕೂ ಹೆಚ್ಚು ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿತ್ತು. ಪಕ್ಷದ ಕಾರ್ಯಕರ್ತರು ಹಾಗೂ ಬೆಂಬಲಿಗರು ಸ್ಥಳದಲ್ಲಿ ಜಮಾಯಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.