ADVERTISEMENT

ಮತ ಕಳವು ಪ್ರಕರಣ: ದೂರಿನ ದಾಖಲೆ ಸಲ್ಲಿಸಲು ಡಿಕೆಶಿಗೆ ಚುನಾವಣಾಧಿಕಾರಿ ಪತ್ರ

​ಪ್ರಜಾವಾಣಿ ವಾರ್ತೆ
Published 9 ಆಗಸ್ಟ್ 2025, 16:03 IST
Last Updated 9 ಆಗಸ್ಟ್ 2025, 16:03 IST
ಡಿ.ಕೆ. ಶಿವಕುಮಾರ್‌
ಡಿ.ಕೆ. ಶಿವಕುಮಾರ್‌   

ಬೆಂಗಳೂರು: ಮತ ಕಳವು ಪ್ರಕರಣ ಕುರಿತು ಆ.8ರಂದು ಸಲ್ಲಿಸಿದ ದೂರಿಗೆ ಪೂರಕವಾದ ದಾಖಲೆಗಳನ್ನು ಸಲ್ಲಿಸುವಂತೆ ರಾಜ್ಯ ಮುಖ್ಯಚುನಾವಣಾಧಿಕಾರಿಯು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಅವರನ್ನು ಕೋರಿದ್ದಾರೆ.

ಈ ಕುರಿತು ಶಿವಕುಮಾರ್‌ ಅವರಿಗೆ ಪತ್ರ ಬರೆದಿರುವ ರಾಜ್ಯ ಮುಖ್ಯಚುನಾವಣಾಧಿಕಾರಿ ವಿ. ಅನ್ಬುಕುಮಾರ್‌, ಚುನಾವಣಾ ಮತದಾರರ ಪಟ್ಟಿ, ಮತ ಕಳವು ಆರೋಪಗಳ ಕುರಿತು ಮುಖ್ಯ ಚುನಾವಣಾಧಿಕಾರಿ ಕಚೇರಿಗೆ ಆ. 5ರಂದು ಕೆಪಿಸಿಸಿ ಬರೆದ ಪತ್ರ, ಆ. 8ರಂದು ತಾವು ಸಲ್ಲಿಸಿದ ದೂರಿಗೆ ಪೂರಕವಾಗಿ ಅಗತ್ಯ ದಾಖಲೆಗಳನ್ನು ಸಲ್ಲಿಸುವಂತೆ ಮನವಿ ಮಾಡಿದ್ದಾರೆ.

ದೂರಿನ ಮೇರೆಗೆ ಕ್ರಮ ಕೈಗೊಳ್ಳಲು, 1960ರ ಮತದಾರರ ನೋಂದಣಿ ನಿಯಮಗಳ ಪ್ರಕಾರ ಘೋಷಣೆ ಹಾಗೂ ಪ್ರತಿಜ್ಞಾ ಪತ್ರದೊಂದಿಗೆ ಅಗತ್ಯ ದಾಖಲೆಗಳನ್ನು ಸಲ್ಲಿಸಬೇಕು ಎಂದು ಹೇಳಿದ್ದಾರೆ. 

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.