ADVERTISEMENT

‘ಹೆಸರು ಸೇರ್ಪಡೆಗೆ ಮತದಾರರ ಸಹಾಯವಾಣಿ ಆ್ಯಪ್‌’

ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್‌ಕುಮಾರ್ ಮೀನಾ

​ಪ್ರಜಾವಾಣಿ ವಾರ್ತೆ
Published 29 ನವೆಂಬರ್ 2022, 20:20 IST
Last Updated 29 ನವೆಂಬರ್ 2022, 20:20 IST
ಬೆಂಗಳೂರು ವಿಶ್ವವಿದ್ಯಾಲಯ ಮತ್ತು ವಿಶ್ವವಿದ್ಯಾಲಯದ ಕಾನೂನು ಕಾಲೇಜು ಮಂಗಳವಾರ ಹಮ್ಮಿಕೊಂಡಿದ್ದ ಮತದಾರರ ನೋಂದಣಿ ಜಾಗೃತಿ ಅಭಿಯಾನ ಮತ್ತು ಸಂವಿಧಾನ ದಿನ ಕಾರ್ಯಕ್ರಮದಲ್ಲಿ ಪ್ರಾಧ್ಯಾಪಕರು, ವಿದ್ಯಾರ್ಥಿಗಳು ಪ್ರತಿಜ್ಞಾವಿಧಿ ಸ್ವೀಕರಿಸಿದರು – ಪ್ರಜಾವಾಣಿ ಚಿತ್ರ
ಬೆಂಗಳೂರು ವಿಶ್ವವಿದ್ಯಾಲಯ ಮತ್ತು ವಿಶ್ವವಿದ್ಯಾಲಯದ ಕಾನೂನು ಕಾಲೇಜು ಮಂಗಳವಾರ ಹಮ್ಮಿಕೊಂಡಿದ್ದ ಮತದಾರರ ನೋಂದಣಿ ಜಾಗೃತಿ ಅಭಿಯಾನ ಮತ್ತು ಸಂವಿಧಾನ ದಿನ ಕಾರ್ಯಕ್ರಮದಲ್ಲಿ ಪ್ರಾಧ್ಯಾಪಕರು, ವಿದ್ಯಾರ್ಥಿಗಳು ಪ್ರತಿಜ್ಞಾವಿಧಿ ಸ್ವೀಕರಿಸಿದರು – ಪ್ರಜಾವಾಣಿ ಚಿತ್ರ   

ಬೆಂಗಳೂರು: ದೇಶದ ಯಾವುದೇ ಮೂಲೆಯಲ್ಲಿದ್ದರೂ ‘ಮತದಾರರ ಸಹಾಯವಾಣಿ’ ಆ್ಯಪ್‌ನಲ್ಲಿ ನೋಂದಣಿ ಮಾಡಿಕೊಳ್ಳುವ ಮೂಲಕ ಮತದಾರರ ಪಟ್ಟಿಗೆ ಸೇರಬಹುದು ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿಮನೋಜ್‌ಕುಮಾರ್ ಮೀನಾ ಹೇಳಿದರು.

ಬೆಂಗಳೂರು ವಿಶ್ವವಿದ್ಯಾಲಯ ಮಂಗಳವಾರ ಹಮ್ಮಿಕೊಂಡಿದ್ದ ಮತದಾರರ ನೋಂದಣಿ
ಜಾಗೃತಿ ಅಭಿಯಾನ ಮತ್ತು ಸಂವಿಧಾನ ದಿನ ಕಾರ್ಯಕ್ರಮ ಉದ್ಘಾಟಿಸಿ, ಈಗಾಗಲೇ ಶೇ 99ರಷ್ಟು ಮತದಾರರ ನೋಂದಣಿ ಆನ್‌ಲೈನ್‌ ಮೂಲಕವೇ ನಡೆದಿದೆ. 18 ವರ್ಷ ತುಂಬಿದ ಯುವ
ಜನರು ನೋಂದಣಿ ಮಾಡಿಕೊಳ್ಳಬೇಕು. ಸದೃಢ ದೇಶ ಕಟ್ಟಲು, ಭವಿಷ್ಯದ ಭಾರತ ನಿರ್ಮಾಣಕ್ಕಾಗಿ ಮತದಾರರ ಪಟ್ಟಿಗೆ ಸೇರಬೇಕು ಎಂದು ಸಲಹೆ ನೀಡಿದರು.

ರಾಜ್ಯ ಹಾಗೂ ಕೇಂದ್ರ ಚುನಾವಣಾ ಆಯೋಗ ಗಳ ಜವಾಬ್ದಾರಿಗಳು ಭಿನ್ನ. ಸ್ಥಳೀಯ ಸಂಸ್ಥೆ
ಗಳ ಚುನಾವಣಾ ಹೊಣೆಗಾರಿಕೆ ರಾಜ್ಯ ಚುನಾವಣಾ ಆಯೋಗದ ಮೇಲಿರುತ್ತದೆ. ಲೋಕಸಭೆ, ರಾಜ್ಯಸಭೆ, ವಿಧಾನಸಭೆಗಳ ಚುನಾವಣೆ ಗಳನ್ನುಕೇಂದ್ರ ಚುನಾವಣಾ ಆಯೋಗ ನಡೆಸು ತ್ತದೆ. ಈಚಿನ ದಿನಗಳಲ್ಲಿ ಚುನಾವಣಾ ನಿಯಮಗಳಲ್ಲಿ ಸಾಕಷ್ಟು ಬದಲಾವಣೆಗಳಾಗಿವೆ ಎಂದು ಅವರು ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.