
ಎಚ್.ಕೆ. ಪಾಟೀಲ
ಬೆಂಗಳೂರು: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಕುರಿತಂತೆ ಕಾನೂನು ಇಲಾಖೆಯಿಂದ ಅಭಿಪ್ರಾಯ ಪಡೆಯಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ಗುರುವಾರ ನಡೆದ ಸಚಿವ ಸಂಪುಟ ಸಭೆಯ ಬಳಿಕ ಈ ವಿಷಯ ತಿಳಿಸಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ, ‘ಎಸ್ಐಆರ್ ಕುರಿತು ಸಭೆಯಲ್ಲಿ ಗಂಭೀರ ಚರ್ಚೆ ನಡೆಯಿತು’ ಎಂದರು.
‘ಪಶ್ಚಿಮ ಬಂಗಾಳ, ಉತ್ತರಪ್ರದೇಶ ಸೇರಿದಂತೆ ಕೆಲವು ರಾಜ್ಯಗಳಲ್ಲಿ ಎಸ್‌ಐಆರ್ ನಡೆಯುತ್ತಿರುವ ರೀತಿ ಮತ್ತು ಕೆಲವು ಕಾನೂನಾತ್ಮಕ ಅಂಶಗಳ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು. ಎಸ್‌ಐಆರ್‌ನ ಸಾಧಕ ಬಾಧಕಗಳೂ ಸೇರಿದಂತೆ ಎಲ್ಲ ವಿಷಯಗಳ ಕುರಿತು ಕಾನೂನು ಇಲಾಖೆ ಸಮಗ್ರವಾಗಿ ಅಧ್ಯಯನ ಮಾಡಿ ಶಿಫಾರಸು ಸಲ್ಲಿಸಲಿದೆ. ಈ ಶಿಫಾರಸುಗಳ ಕುರಿತು ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ, ಮುಂದಿನ ತೀರ್ಮಾನ ತೆಗೆದುಕೊಳ್ಳಲಾಗುವುದು’ ಎಂದು ಅವರು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.