ADVERTISEMENT

ಚಂದನದಲ್ಲಿ ’ಮತದಾರ ಪ್ರಭುಗಳು’ ಸಿನಿಮಾ ಪ್ರಸಾರ ನಾಳೆ

​ಪ್ರಜಾವಾಣಿ ವಾರ್ತೆ
Published 23 ಜನವರಿ 2026, 15:23 IST
Last Updated 23 ಜನವರಿ 2026, 15:23 IST
<div class="paragraphs"><p>ಪ್ರಾತಿನಿಧಿಕ ಚಿತ್ರ</p></div>

ಪ್ರಾತಿನಿಧಿಕ ಚಿತ್ರ

   

ಬೆಂಗಳೂರು: ರಾಷ್ಟ್ರೀಯ ಮತದಾರರ ದಿನಾಚರಣೆಯ ಪ್ರಯುಕ್ತ ಸಮಾಜ ಕಲ್ಯಾಣ ಇಲಾಖೆ ಪ್ರಾಯೋಜಿಸಿರುವ ‘ಮತದಾರ ಪ್ರಭುಗಳು’ ಎಂಬ ಕನ್ನಡ ಸಿನಿಮಾ ಭಾನುವಾರ (ಜ. 25) ಮಧ್ಯಾಹ್ನ 2 ಗಂಟೆಯಿಂದ 4.30ರವರೆಗೆ ದೂರದರ್ಶನ ಚಂದನ ವಾಹಿನಿಯಲ್ಲಿ ಪ್ರಸಾರವಾಗಲಿದೆ.

‘ಈ ಸಿನಿಮಾವು ಮತದಾರರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ನಿರ್ಮಾಣಗೊಂಡಿರುವುದರಿಂದ ಇಲಾಖೆಯ ವತಿಯಿಂದ ಪ್ರಸಾರ ಮಾಡಲಾಗುತ್ತಿದೆ’ ಎಂದು ಇಲಾಖೆಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ADVERTISEMENT

‘ನ್ಯಾಯಸಮ್ಮತ ಚುನಾವಣೆಗಳ ಕುರಿತಂತೆ ಸಂವಿಧಾನ ವ್ಯಕ್ತಪಡಿಸಿರುವ ಆಶಯಗಳ ಮೇಲೆ ಈ ಸಿನಿಮಾ ಬೆಳಕು ಚೆಲ್ಲಿದೆ. ಅಲ್ಲದೆ, ಹದಗೆಟ್ಟಿರುವ ರಾಜಕೀಯ ವ್ಯವಸ್ಥೆಯನ್ನು ಪರಿಶುದ್ಧಗೊಳಿಸಬೇಕಾದ ಜವಾಬ್ದಾರಿ ಯಾರ ಮೇಲಿದೆ? ಹೇಗೆ ಸ್ವಚ್ಛಗೊಳಿಸಬೇಕು ಎಂಬ ಅಂಶಗಳ ಬಗ್ಗೆಯೂ ಸಿನಿಮಾದಲ್ಲಿ ಚರ್ಚಿಸಲಾಗಿದೆ’ ಎಂದು ನಿರ್ದೇಶಕ ಎಚ್‌. ಅನಂತರಾಯಪ್ಪ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.