ADVERTISEMENT

ವೋಟ್ ಹಾಕಿದ ಫೋಟೊಗಳು ವೈರಲ್!

​ಪ್ರಜಾವಾಣಿ ವಾರ್ತೆ
Published 5 ಡಿಸೆಂಬರ್ 2019, 14:16 IST
Last Updated 5 ಡಿಸೆಂಬರ್ 2019, 14:16 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಅಥಣಿ (ಬೆಳಗಾವಿ ಜಿಲ್ಲೆ): ಮತಗಟ್ಟೆಯಲ್ಲಿ ಮೊಬೈಲ್‌ ಬಳಕೆ ನಿಷೇಧಿಸಲಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿತ್ತು. ಈ ನಡುವೆಯೂ ಕ್ಷೇತ್ರದ ಉಪ ಚುನಾವಣೆಯಲ್ಲಿ ಕೆಲವರು ಮತದಾನ ಮಾಡಿದ ಫೋಟೊಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಾಕಿದ್ದಾರೆ. ಈ ಚಿತ್ರಗಳು ಹಬ್ಬಿವೆ.

ಇವಿಎಂ ಹಾಗೂ ವಿವಿಪ್ಯಾಟ್ ಯಂತ್ರಗಳ ಚಿತ್ರಗಳನ್ನೂ ತೆಗೆದು ಸಾಮಾಜಿಕ ಜಾಲತಾಣಗಳಲ್ಲಿ ಹಾಕಿದ್ದಾರೆ. ಈ ಮೂಲಕ ಗುಪ್ತ ಮತದಾನವನ್ನು ಅಗೌರವಿಸಲಾಗಿದೆ.

ಪೊಲೀಸರು ಹಾಗೂ ಮತಗಟ್ಟೆ ಸಿಬ್ಬಂದಿಯು ಮೊಬೈಲ್‌ ಬಳಸುವುದಕ್ಕೆ ಅವಕಾಶ ನೀಡಿರುವುದು ಅಥವಾ ನಿಗಾ ವಹಿಸದಿರುವುದು ತೀವ್ರ ಚರ್ಚೆಗೆ ಗ್ರಾಸವಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.