ADVERTISEMENT

ಸುಗ್ರೀವಾಜ್ಞೆ ವಾಪಸಿಗೆ ‘ಕೈ’ ಕಿಡಿ

​ಪ್ರಜಾವಾಣಿ ವಾರ್ತೆ
Published 9 ಫೆಬ್ರುವರಿ 2025, 16:10 IST
Last Updated 9 ಫೆಬ್ರುವರಿ 2025, 16:10 IST
ವಿ.ಎಸ್. ಉಗ್ರಪ್ಪ
ವಿ.ಎಸ್. ಉಗ್ರಪ್ಪ   

ಬೆಂಗಳೂರು: ‘ಸಾಲಗಾರರಿಗೆ ಮೈಕ್ರೊ ಫೈನಾನ್ಸ್ ಕಂಪನಿಗಳು, ಲೇವಾದೇವಿದಾರರು ಕಿರುಕುಳ ನೀಡುವುದನ್ನು ತಪ್ಪಿಸಲು ರಾಜ್ಯ ಸರ್ಕಾರ ರೂಪಿಸಿದ್ದ ಸುಗ್ರೀವಾಜ್ಞೆಯನ್ನು ಬಿಜೆಪಿಯವರು ರಾಜ್ಯಪಾಲರ ಮೇಲೆ ಒತ್ತಡ ಹೇರಿ ವಾಪಸು ಕಳುಹಿಸುವಂತೆ ಮಾಡಿದ್ದಾರೆ’ ಎಂದು ಕೆಪಿಸಿಸಿ ಉಪಾಧ್ಯಕ್ಷ ವಿ.ಎಸ್. ಉಗ್ರಪ್ಪ ಆರೋಪಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಸುಗ್ರೀವಾಜ್ಞೆ ಜಾರಿಗೆ ಬಂದರೆ ರಾಜ್ಯ ಸರ್ಕಾರಕ್ಕೆ ಒಳ್ಳೆಯ ಹೆಸರು ಬರಬಹುದೆಂದು ಈ ಕೆಲಸ ಮಾಡಿದ್ದಾರೆ’ ಎಂದು ದೂರಿದರು. 

ರಾಜ್ಯ ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ಎಚ್‌.ಎಂ.ರೇವಣ್ಣ ಮಾತನಾಡಿ, ‘ಸಾಲಗಾರರಿಗೆ ರಕ್ಷಣೆ ನೀಡಲು ಸುಗ್ರೀವಾಜ್ಞೆ  ಅತೀ ಅಗತ್ಯವಾಗಿತ್ತು. ರಿಸರ್ವ್‌ ಬ್ಯಾಂಕಿನ ನಿಯಮಗಳಿಗೆ ಅಡಿಯಲ್ಲಿ ಈ ಸುಗ್ರೀವಾಜ್ಞೆಯನ್ನು ಸಿದ್ಧಪಡಿಸಲಾಗಿತ್ತು. ಆದರೆ, ಅದನ್ನು ವಾಪಸ್ ಕಳುಹಿಸಿರುವ ರಾಜ್ಯಪಾಲರ ನಡೆದ ಒಪ್ಪುವಂಥದ್ದಲ್ಲ’ ಎಂದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.