ADVERTISEMENT

ವಿಟಿಯು ಕುಲಸಚಿವ ಜಗನ್ನಾಥ ರೆಡ್ಡಿ ಅಮಾನತು

​ಪ್ರಜಾವಾಣಿ ವಾರ್ತೆ
Published 16 ಫೆಬ್ರುವರಿ 2019, 20:00 IST
Last Updated 16 ಫೆಬ್ರುವರಿ 2019, 20:00 IST

ಬೆಳಗಾವಿ: ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದಲ್ಲಿ ನಡೆದಿದೆ ಎನ್ನಲಾದ ₹ 200 ಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ಕುಲಸಚಿವ ಜಗನ್ನಾಥ ರೆಡ್ಡಿ ಅವರನ್ನು ಕುಲಪತಿ ಪ್ರೊ.ಕರಿಸಿದ್ದಪ್ಪ ಶುಕ್ರವಾರ ಅಮಾನತುಗೊಳಿಸಿದ್ದಾರೆ.

‘ಅಮಾನತು ಆದೇಶದ ಇ–ಮೇಲ್‌ ಪ್ರತಿ ತಮಗೆ ಶುಕ್ರವಾರ ರಾತ್ರಿ ಸಿಕ್ಕಿದೆ’ ಎಂದು ಜಗನ್ನಾಥ ರೆಡ್ಡಿ ‘ಪ್ರಜಾವಾಣಿ’ಗೆ ಖಚಿತಪಡಿಸಿದ್ದಾರೆ.

ಏನಿದು ದೂರು?

ADVERTISEMENT

ಗುತ್ತಿಗೆ ಕಾಮಗಾರಿ ನೀಡುವಲ್ಲಿ ಅವ್ಯವಹಾರ ಎಸಗಲಾಗಿದೆ. ಸುಮಾರು ₹ 200 ಕೋಟಿ ಹಗರಣ ಇದಾಗಿದೆ. ಇದರ ಬಗ್ಗೆ ತನಿಖೆ ಕೈಗೊಳ್ಳಬೇಕೆಂದು ವಿಶ್ವವಿದ್ಯಾಲಯದ ಇಬ್ಬರು ವಿದ್ಯಾರ್ಥಿಗಳ ಪಾಲಕರಾದ ಡಾ.ಎಸ್‌.ವಿಶ್ವನಾಥ ಹಾಗೂ ಡಾ.ವಾಸುದೇವ ಮೂರ್ತಿ ಅವರು ಕಳೆದ ವರ್ಷ ಅಕ್ಟೋಬರ್‌ನಲ್ಲಿ ರಾಜ್ಯಪಾಲ ವಜೂಭಾಯಿ ವಾಲಾ ಅವರಿಗೆ ದೂರು ನೀಡಿದ್ದರು.

ಇದರ ಆಧಾರದ ಮೇಲೆ ಕ್ರಮ ಕೈಗೊಳ್ಳುವಂತೆ ಕುಲಪತಿ ಪ್ರೊ.ಕರಿಸಿದ್ದಪ್ಪ ಅವರಿಗೆ ರಾಜ್ಯಪಾಲರು ಸೂಚನೆ ನೀಡಿದ್ದರು. ಕರಿಸಿದ್ದಪ್ಪ ಅವರು ತನಿಖೆ ಕೈಗೊಳ್ಳಲು ನಿವೃತ್ತ ಜಿಲ್ಲಾ ಸೆಷನ್ಸ್‌ ನ್ಯಾಯಾಧೀಶ ಡಿ.ಎಸ್‌. ಶಿಂಧೆ ಅವರನ್ನು ಕಳೆದ ತಿಂಗಳು ಜನವರಿಯಲ್ಲಿ ನೇಮಕ ಮಾಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.