ADVERTISEMENT

ಎಂ.ಡಿ.ವೆಂಕಟೇಶ್‌ ನೂತನ ಕುಲಪತಿ

ಡಾ.ಎಚ್‌.ವಿನೋದ್ ಭಟ್‌ ಮಾಹೆ ಕಾರ್ಯ ನಿರ್ವಾಹಕ ಉಪಾಧ್ಯಕ್ಷ

​ಪ್ರಜಾವಾಣಿ ವಾರ್ತೆ
Published 16 ಜೂನ್ 2020, 21:27 IST
Last Updated 16 ಜೂನ್ 2020, 21:27 IST
ವೆಂಕಟೇಶ್‌
ವೆಂಕಟೇಶ್‌   

ಉಡುಪಿ: ಸಿಕ್ಕಿಂ ಮಣಿಪಾಲ ವಿಶ್ವವಿದ್ಯಾಲಯದ ಕುಲಪತಿಯಾಗಿರುವ ಎಂ.ಡಿ. ವೆಂಕಟೇಶ್ ಅವರು ಮಣಿಪಾಲದ ಮಾಹೆ ವಿಶ್ವವಿದ್ಯಾಲಯದ ಕುಲಪತಿಯನ್ನಾಗಿ ನೇಮಕ ಮಾಡಲಾಗಿದೆ ಎಂದು ಆಡಳಿತ ಮಂಡಳಿ ತಿಳಿಸಿದೆ.

ಪ್ರಸ್ತುತ ಮಾಹೆ ಕುಲಪತಿ ಡಾ.ಎಚ್‌.ವಿನೋದ್ ಭಟ್ ಅವರ ಅಧಿಕಾರಾವಧಿ ಮುಕ್ತಾಯವಾಗಲಿರುವ ಹಿನ್ನೆಲೆಯಲ್ಲಿ ಜುಲೈ 1ರಂದು ಎಂ.ಡಿ. ವೆಂಕಟೇಶ್‌ ನೂತನ ಕುಲಪತಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ. ಡಾ.ಎಚ್‌.ವಿನೋದ್ ಭಟ್ ಅವರನ್ನು ಮಾಹೆ ಕಾರ್ಯ ನಿರ್ವಾಹಕ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ ಎಂದು ತಿಳಿಸಿದೆ. ಮಾಹೆಯನ್ನು ಜಾಗತಿಕ ಮಟ್ಟಕ್ಕೆ ಕೊಂಡೊಯ್ಯಲುಡಾ.ಎಚ್‌.ವಿನೋದ್ ಭಟ್ ಶ್ರಮಿಸಿದ್ದಾರೆ ಎಂದು ಮಾಹೆ ಕುಲಾಧಿಪತಿ ಡಾ. ರಾಮದಾಸ್ ಪೈ ಶ್ಲಾಘಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT