ADVERTISEMENT

ಮಕ್ಕಳಿಗೆ ನೀರು ಕುಡಿಯುವಂತೆ ಜ್ಞಾಪಿಸಲು ಶಾಲೆಗಳಲ್ಲಿ ‘ನೀರಿನ ಗಂಟೆ’ ಕಡ್ಡಾಯ

​ಪ್ರಜಾವಾಣಿ ವಾರ್ತೆ
Published 15 ಜನವರಿ 2026, 15:54 IST
Last Updated 15 ಜನವರಿ 2026, 15:54 IST
<div class="paragraphs"><p>ಮಕ್ಕಳು</p></div>

ಮಕ್ಕಳು

   

ಬೆಂಗಳೂರು: ಮಕ್ಕಳಿಗೆ ನೀರು ಕುಡಿಯುವಂತೆ ಜ್ಞಾಪಿಸಲು ಶಾಲೆಗಳಲ್ಲಿ ‘ನೀರಿನ ಗಂಟೆ’ (ವಾಟರ್‌ ಬೆಲ್‌) ಬಾರಿಸುವುದನ್ನು ಕಡ್ಡಾಯಗೊಳಿಸಿ, ಶಾಲಾ ಶಿಕ್ಷಣ ಇಲಾಖೆಯ ‘ಪಿ.ಎಂ ಪೋಷಣ್‌ ಶಕ್ತಿ ನಿರ್ಮಾಣ್‌’ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದಾರೆ. 

ಆರೋಗ್ಯ, ಬೆಳವಣಿಗೆ ದೃಷ್ಟಿಯಿಂದ ಮಕ್ಕಳು ನಿತ್ಯವೂ ನಿಗದಿತ ಪ್ರಮಾಣದಲ್ಲಿ ನೀರು ಕುಡಿಯಬೇಕು. ಆದರೆ, ಮಕ್ಕಳಿಗೆ ಈ ಕುರಿತು ಸೂಕ್ತ ಅರಿವು ಇರುವುದಿಲ್ಲ. ಅದಕ್ಕಾಗಿ ಶಾಲಾ ಅವಧಿಯಲ್ಲಿ ಮಕ್ಕಳು ನಿಯಮಿತವಾಗಿ ನೀರು ಕುಡಿಯುವುದನ್ನು ನೆನಪಿಸಬೇಕಾದುದು ಶಿಕ್ಷಕರು ಮತ್ತು ಸಿಬ್ಬಂದಿಯ ಜವಾಬ್ದಾರಿಯೂ ಆಗಿದೆ ಎಂದು ಹೇಳಿದ್ದಾರೆ.

ADVERTISEMENT

ಮಕ್ಕಳಿಗೆ ಶುದ್ಧ ಕುಡಿಯುವ ನೀರು ನೀಡಬೇಕು. ನೀರಿನಿಂದ ಹರಡಬಹುದಾದ ಕಾಯಿಲೆಗಳಿಗೆ ತುತ್ತಾಗದಂತೆ ಎಚ್ಚರ ವಹಿಸಬೇಕು. ಮಧ್ಯಾಹ್ನದ ಬಿಸಿಯೂಟ, ಆಟದ ಸಮಯದಲ್ಲಿ ನೀರು ಲಭ್ಯ ಇರುವಂತೆ ನೋಡಿಕೊಳ್ಳಬೇಕು. ಎಲ್‌ಕೆಜಿ, ಯುಕೆಜಿ ಒಳಗೊಂಡಂತೆ ಎಲ್ಲ ಹಂತದಲ್ಲೂ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆಗಳು ಈ ನಿಯಮ ಪಾಲಿಸಬೇಕು ಎಂದು ಸೂಚಿಸಿದ್ದಾರೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.