ADVERTISEMENT

‘ಕೃಷ್ಣಾ, ಭೀಮಾಗೆ ನೀರು ಮಹಾರಾಷ್ಟ್ರ ಜತೆ ಒಪ್ಪಂದಕ್ಕೆ ಸಿದ್ಧ’

ಚರ್ಚೆಗೆ ಸಮಯ ನೀಡದ ಮಹಾರಾಷ್ಟ್ರ ಸಿಎಂ: ಕುಮಾರಸ್ವಾಮಿ ಬೇಸರ

​ಪ್ರಜಾವಾಣಿ ವಾರ್ತೆ
Published 27 ಜೂನ್ 2019, 19:45 IST
Last Updated 27 ಜೂನ್ 2019, 19:45 IST
   

ಕಲಬುರ್ಗಿ: ‘ಬೇಸಿಗೆ ಕಾಲದಲ್ಲಿ ಮಹಾರಾಷ್ಟ್ರದಿಂದ ಭೀಮಾ ಹಾಗೂ ಕೃಷ್ಣಾ ನದಿಗಳಿಗೆ ನೀರು ಹರಿಸುವ ಸಂಬಂಧ ಚರ್ಚಿಸಲು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್‌ ಅವರಿಗೆ ಎರಡು ಬಾರಿ ಮನವಿ ಮಾಡಿದ್ದೆ. ಹಲವು ಪತ್ರಗಳನ್ನೂ ಬರೆದಿದ್ದೇನೆ. ಆದರೆ, ಅವರು ಇನ್ನೂ ಸಮಯ ನಿಗದಿ ಮಾಡಿಲ್ಲ’ ಎಂದು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದರು.

‘ಬೇಸಿಗೆ ಸಮಯದಲ್ಲಿ ರಾಜ್ಯಕ್ಕೆ ಅವರು ನೀರು ಹರಿಸಬೇಕಿತ್ತು. ಅದನ್ನು ಉಲ್ಲಂಘನೆ ಮಾಡಿದ್ದಾರೆ ಎಂದು ನಾನು ಹೇಳಲು ಹೋಗುವುದಿಲ್ಲ. ಹಣ ಕೊಡುತ್ತೇವೆ ನೀರು ಕೊಡಿ ಎಂದು ಕೇಳಿದ್ದೆವು. ತಮಗೆ ಹಣದ ಅವಶ್ಯಕತೆ ಇಲ್ಲ. ಅದರ ಬದಲಾಗಿ ಮಹಾರಾಷ್ಟ್ರದ ಹಳ್ಳಿಗಳಿಗೆ ಕೃಷ್ಣಾ ನದಿ ನೀರನ್ನು ಬಳಸಿಕೊಳ್ಳಲು ಅವಕಾಶ ನೀಡುವಂತೆ ಕೇಳಿದ್ದರು. ಅದಕ್ಕೂ ನಾವು ಒಪ್ಪಿದ್ದೇವೆ’ ಎಂದು ಗುರುವಾರ ಪ್ರತಿಕ್ರಿಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT