ADVERTISEMENT

ಕೃಷ್ಣಾಗೆ ನೀರು ಹರಿಸುವ ಕುರಿತ ಮಾಹಿತಿ ವಿನಿಮಯಕ್ಕೆ ಮುಂಬೈನಲ್ಲಿ 8ರಂದು ಸಭೆ

​ಪ್ರಜಾವಾಣಿ ವಾರ್ತೆ
Published 7 ಜುಲೈ 2020, 12:21 IST
Last Updated 7 ಜುಲೈ 2020, 12:21 IST
ಕೃಷ್ಣಾ ನದಿ
ಕೃಷ್ಣಾ ನದಿ    

ಬೆಳಗಾವಿ: ‘ಕೃಷ್ಣಾ ನದಿಗೆ ನೀರು ಹರಿಸುವ ಕುರಿತು ಮಾಹಿತಿ ವಿನಿಮಯ ಮಾಡಿಕೊಳ್ಳುವುದಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರದ ಸಚಿವ ಜಯಂತ್‌ ಪಾಟೀಲ ಅವರ ಜೊತೆ ಮುಂಬೈನಲ್ಲಿ ಬುಧವಾರ ಮಾತುಕತೆ ನಡೆಸಲಿದ್ದೇನೆ’ ಎಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಹೇಳಿದರು.

ನಗರದಲ್ಲಿ ಮಂಗಳವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಮಳೆಗಾಲದ ಸಮಯದಲ್ಲಿ ಕೃಷ್ಣಾ ಕಣಿವೆಯಲ್ಲಿ ಸಾಕಷ್ಟು ಮಳೆಯಾಗುತ್ತದೆ. ಮಹಾರಾಷ್ಟ್ರದ ಜಲಾಶಯಗಳಿಂದ ಏಕಾಏಕಿ ನದಿಗೆ ನೀರು ಬಿಡುವುದರಿಂದ ರಾಜ್ಯದಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗುತ್ತದೆ. ನದಿಗೆ ನೀರು ಬಿಡುವ ಮೊದಲೇ ರಾಜ್ಯದ ಅಧಿಕಾರಿಗಳಿಗೆ ಮಾಹಿತಿ ನೀಡಿದರೆ ಪ್ರವಾಹ ಪರಿಸ್ಥಿತಿಯನ್ನು ತಡೆಯಬಹುದಾಗಿದೆ. ಇದರ ಬಗ್ಗೆ ಚರ್ಚಿಸಲಾಗುವುದು’ ಎಂದು ತಿಳಿಸಿದರು.

‘ಬೇಸಿಗೆಯಲ್ಲಿ ಕೃಷ್ಣಾ ನದಿ ಪಾತ್ರದ ಜನರಿಗೆ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿನ ಕೊರತೆ ಕಾಡುತ್ತದೆ. ಕೊಯ್ನಾ ಜಲಾಶಯದಿಂದ 4 ಟಿಎಂಸಿ ನೀರು ಬಿಡುವ ಕುರಿತು ಒಪ್ಪಂದ ಮಾಡಿಕೊಳ್ಳುವ ಬಗ್ಗೆಯೂ ಚರ್ಚೆ ನಡೆಯಲಿದೆ’ ಎಂದು ಹೇಳಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.