ADVERTISEMENT

ಅನರ್ಹರ ತೀಟೆಗಳಿಗೆ ಹಣ ನೀಡಿಲ್ಲ: ಎಚ್‌.ಡಿ ಕುಮಾರಸ್ವಾಮಿ

​ಪ್ರಜಾವಾಣಿ ವಾರ್ತೆ
Published 24 ನವೆಂಬರ್ 2019, 7:56 IST
Last Updated 24 ನವೆಂಬರ್ 2019, 7:56 IST
ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಅವರು ಶನಿವಾರ ಬೆಂಗಳೂರಿನಲ್ಲಿ ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.
ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಅವರು ಶನಿವಾರ ಬೆಂಗಳೂರಿನಲ್ಲಿ ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.   

ಬೆಂಗಳೂರು: ‘ನಾನು ಮುಖ್ಯಮಂತ್ರಿಯಾಗಿದ್ದಾಗ ಅನರ್ಹ ಶಾಸಕರ ಕ್ಷೇತ್ರಗಳಿಗೆ ಸಾಕಷ್ಟು ಅನುದಾನ ಕೊಟ್ಟಿದ್ದೇನೆ. ಆದರೆ ಅವರ ತೀಟೆಗಳಿಗೆ, ಅವರು ಹಣ ಮಾಡುವುದಕ್ಕೆ ನಾನು ಸಹಕಾರ ಕೊಡಲಿಲ್ಲ ಎಂಬ ಕಾರಣಕ್ಕೆ ನನ್ನ ಬೆನ್ನಿಗೆ ಚೂರಿ ಹಾಕಿದ್ದಾರೆ’ ಎಂದು ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ.ಕುಮಾರಸ್ವಾಮಿ ಹೇಳಿದರು.

ಯಶವಂತಪುರ ವಿಧಾನಸಭಾ ಕ್ಷೇತ್ರದ ವಿವಿಧ ಕಡೆ ತಮ್ಮ ಪಕ್ಷದ ಅಭ್ಯರ್ಥಿ ಪರ ಶನಿವಾರ ಚುನಾವಣಾ ಪ್ರಚಾರ ನಡೆಸಿದ ಅವರು, ‘ನಾನು ಹಣ ಕೊಟ್ಟೆ, ಯಡಿಯೂರಪ್ಪ ಅವರು ಅದಕ್ಕೆ ಆದೇಶ ಮಾಡಿದ್ದಾರೆ. ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿದ್ದರೇ ಚೆನ್ನಾಗಿರುತ್ತಿತ್ತು ಎಂದು ಬಿಜೆಪಿ ಶಾಸಕರೇ ಈಗ ಹೇಳುತ್ತಿದ್ದಾರೆ’ ಎಂದರು.

‘ಯಶವಂತಪುರ ಕ್ಷೇತ್ರಕ್ಕೆ ₹ 419 ಕೋಟಿ ಅನುದಾನ ಕೊಟ್ಟಿದ್ದೇನೆ.ಕಳೆದ ಎರಡು ಬಾರಿ ಜವರಾಯಿಗೌಡ ಕಡಿಮೆ ಅಂತರದಲ್ಲಿ ಸೋತಿದ್ದಾರೆ.ಈ ಬಾರಿ ಮತ್ತೆ ನಮ್ಮ ಪಕ್ಷದ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ,ಐನೂರು, ಸಾವಿರ ರೂಪಾಯಿಗಳಿಗೆ ಮಾರು ಹೊಗಬೇಡಿ,ನಿಮ್ಮ ಶಾಶ್ವತ ಬದುಕು ಕಟ್ಟಿಕೊಡುವುದರ ಬಗ್ಗೆಯೋಚನೆ ಮಾಡಿ’ ಎಂದು ಕೇಳಿಕೊಂಡರು.

ADVERTISEMENT

‘ಮುಖ್ಯಮಂತ್ರಿ ಆಗಿದ್ದಾಗ ಕುಮಾರಸ್ವಾಮಿ ಕೈಗೆ ಸಿಗುತ್ತಿರಲಿಲ್ಲ, ತಾಜ್‌ ಹೋಟೆಲ್‌ನಲ್ಲಿ ಇರುತ್ತಿದ್ದರು ಎಂದು ಕೆಲವರು ಹೇಳಿದ್ದಾರೆ. ಅವರು ಬಹಿರಂಗ ಚರ್ಚೆಗೆ ಬರಲಿ. ಯಾರ‍್ಯಾರಿಗೆಎಷ್ಟೆಷ್ಟು ಅನುದಾನ ನೀಡಿದ್ದೇನೆ ಎಂಬ ಲೆಕ್ಕ ನನ್ನ ಬಳಿ ಇದೆ. ಈದಾಖಲೆಗಳನ್ನು ಜನರ ಮುಂದೆ ಇಡುತ್ತೇನೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.