ADVERTISEMENT

ಎಂಇಎಸ್‌ ವಿರುದ್ಧ ಈ ಬಾರಿ ನಿರ್ಣಾಯಕ ಕ್ರಮ ಎಂದು ಗುಡುಗಿದ ಸಿಎಂ ಬೊಮ್ಮಾಯಿ

​ಪ್ರಜಾವಾಣಿ ವಾರ್ತೆ
Published 20 ಡಿಸೆಂಬರ್ 2021, 7:52 IST
Last Updated 20 ಡಿಸೆಂಬರ್ 2021, 7:52 IST
ಬಸವರಾಜ ಬೊಮ್ಮಾಯಿ
ಬಸವರಾಜ ಬೊಮ್ಮಾಯಿ   

ಬೆಳಗಾವಿ: ‘ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್‌) ವಿರುದ್ಧ ಈ ಬಾರಿ ನಿರ್ಣಾಯಕ ಕ್ರಮ ಕೈಗೊಳ್ಳಲಾಗುವುದು’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಇಲ್ಲಿ ಪತ್ರಕರ್ತರೊಂದಿಗೆ ಸೋಮವಾರ ಮಾತನಾಡಿದ ಅವರು, ‘ಈ ಹಿಂದೆಲ್ಲ ಕಾಟಾಚಾರಕ್ಕೆ ಎನ್ನುವಂತೆ ಕೆಲವರನ್ನು ಬಂಧಿಸಿ ಬಿಡುಗಡೆ ಮಾಡಲಾಗುತ್ತಿತ್ತು. ಆದರೆ, ಈ ಬಾರಿ ನಾವು ಪ್ರಮುಖರನ್ನೇ ಬಂಧಿಸಿದ್ದೇವೆ. ಹಿಂದೆಲ್ಲ ಈ ಕೆಲಸ ಆಗಿರಲಿಲ್ಲ. ಕಾನೂನು ಕೈಗೆತ್ತಿಕೊಳ್ಳುವವರು ಯಾರೇ ಇರಲಿ ಅತ್ಯಂತ ಕಠಿಣ ಕ್ರಮ ಕೈಗೊಳ್ಳುತ್ತೇವೆ’ ಎಂದು ಹೇಳಿದರು.

‘ರಾಜ್ಯದಲ್ಲಿ ಪುಂಡಾಟಿಕೆ ಮಾಡಿದ ಪ್ರಮುಖರನ್ನು ಬಂಧಿಸಲಾಗಿದೆ. ನಿಯಂತ್ರಣ ಮಾಡುತ್ತಿದ್ದೇವೆ. ನಮ್ಮ ಗೃಹ ಕಾರ್ಯದರ್ಶಿ, ಪೊಲೀಸ್ ಮಹಾನಿರ್ದೇಶಕರು ಮಹಾರಾಷ್ಟ್ರ ಸರ್ಕಾರದೊಂದಿಗೆ ಮಾತನಾಡಿ ಅಲ್ಲಿರುವ ಕನ್ನಡಿಗರ ಆಸ್ತಿ, ಸರ್ಕಾರಿ ವಾಹನಗಳ ರಕ್ಷಣೆಗೆ ಕ್ರಮ ಕೈಗೊಳ್ಳುವಂತೆ ಮಾಡಿದ್ದಾರೆ. ಪುಂಡಾಟಿಕೆ ವಿರುದ್ಧ ನಿರ್ಣಾಯಕ ಕ್ರಮ ಖಚಿತ. ಅಂತಹ ಚಟುವಟಿಕೆಗಳನ್ನು ಮುಂದುವರಿಸಲು ಬಿಡುವುದಿಲ್ಲ’ ಎಂದು ಎಚ್ಚರಿಕೆ ನೀಡಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.