ADVERTISEMENT

ಪಂಚಮಸಾಲಿ ಸಮಾವೇಶ: ಮಾತುಕತೆಗೆ ಸ್ವಾಮೀಜಿಗಳನ್ನು ಆಹ್ವಾನಿಸುತ್ತೇವೆ: ಬೊಮ್ಮಾಯಿ

​ಪ್ರಜಾವಾಣಿ ವಾರ್ತೆ
Published 21 ಫೆಬ್ರುವರಿ 2021, 6:58 IST
Last Updated 21 ಫೆಬ್ರುವರಿ 2021, 6:58 IST
ಗೃಹ , ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ ಬೊಮ್ಮಾಯಿ
ಗೃಹ , ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ ಬೊಮ್ಮಾಯಿ   

ಬೆಂಗಳೂರು: 2ಎ ಮೀಸಲಾತಿಗೆ ಲಿಂಗಾಯತ ಪಂಚಮಸಾಲಿ ಸಮುದಾಯದ ಹೋರಾಟದ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಜತೆ ಮಾತನಾಡಿದ್ದೇವೆ ಎಂದು ಗೃಹ , ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಹಿಂದುಳಿದ ವರ್ಗಗಳ ಆಯೋಗ ಸಭೆ ನಡೆಸಿ ಈ ಬಗ್ಗೆ ಸಮಾಲೋಚಿಸಲಿದೆ. ಸಂವಿಧಾನದ ಪ್ರಕಾರ ಆಯೋಗದ ಮೂಲಕವೇ ಶಿಫಾರಸು ಬರಬೇಕು. ಈ ಮಧ್ಯೆ ಇಂದು ಪಂಚಮಸಾಲಿ ಸಮಾವೇಶ ನಡೆಯುತ್ತಿದೆ. ಸ್ವಾಮೀಜಿಗಳ ಜತೆ ಈಗಾಗಲೇ ಮಾತಾಡಿದ್ದೇವೆ. ಸರ್ಕಾರದ ಕ್ರಮಗಳ ಕುರಿತು ಸ್ವಾಮಿಜಿಗಳಿಗೆ ಮನವರಿಕೆ ಮಾಡಿಕೊಡುತ್ತೇವೆ ಎಂದು ಅವರು ಹೇಳಿದ್ದಾರೆ.

ಇಂದು ಸಮಾವೇಶದಲ್ಲೂ ಈ ವಿಚಾರ ಹೇಳುತ್ತೇವೆ. ಸರ್ಕಾರ ಇದುವರೆಗೆ ಕೈಗೊಂಡ ಕ್ರಮಗಳ ಬಗ್ಗೆ ಮನವರಿಕೆ ಮಾಡುವ ಮೂಲಕ ಮಾತುಕತೆಗೆ ಬನ್ನಿ ಅಂತ ಸ್ವಾಮೀಜಿಗಳನ್ನು ಆಹ್ವಾನಿಸುತ್ತೇವೆ ಎಂದು ಬೊಮ್ಮಾಯಿ ಹೇಳಿದ್ದಾರೆ.

ADVERTISEMENT

ಸಿಎಂ ಯಡಿಯೂರಪ್ಪ ಇದೇ ಮಾತನ್ನು ಹೇಳಿದ್ದಾರೆ. ಮುಂದಿನ‌ ದಿನಗಳಲ್ಲಿ ಮಾತುಕತೆ ಮೂಲಕ ನಡೆಸಬೇಕಾದ ಪ್ರಕ್ರಿಯೆ ಕುರಿತು ಚರ್ಚೆ ಮಾಡೋಣ ಎಂಬುದು ಸಿಎಂ ನಿಲುವು ಎಂದ ಬೊಮ್ಮಾಯಿ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.