ADVERTISEMENT

‘ಟಿಪ್ಪು ಸುಲ್ತಾನ್ ಪಠ್ಯ ಕೈಬಿಡುವುದಿಲ್ಲ’: ಶಿಕ್ಷಣ ಸಚಿವ ಬಿ.ಸಿ.ನಾಗೇಶ್

​ಪ್ರಜಾವಾಣಿ ವಾರ್ತೆ
Published 20 ಏಪ್ರಿಲ್ 2022, 10:57 IST
Last Updated 20 ಏಪ್ರಿಲ್ 2022, 10:57 IST
   

ಬೆಂಗಳೂರು:ಪಠ್ಯದಿಂದ ಟಿಪ್ಪು ಸುಲ್ತಾನ್ ಕುರಿತ ವಿಷಯ ಕೈಬಿಡುವುದಿಲ್ಲ. ಸಾಕ್ಷ್ಯಾಧಾರ ಇಲ್ಲದ ಅಂಶಗಳಿದ್ದರೆ ಕೈಬಿಡಲಾಗುವುದು. ‘ಮೈಸೂರು ಹುಲಿ’ ಎಂಬ ಬಿರುದು ಕೈಬಿಡುವುದಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದರು.

ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ‘ಶಾಸಕ ಅಪ್ಪಚ್ಚು ರಂಜನ್‌ ಅವರು ಟಿಪ್ಪುವಿನ ಕುರಿತ ಪಠ್ಯ ಕೈಬಿಡಬೇಕು. ಉಳಿಸಿದರೆ ಆತನ ಎಲ್ಲ ಅಂಶವನ್ನು ಸೇರಿಸಬೇಕು ಎಂದು ಒತ್ತಾಯಿಸಿದ್ದರು. ಅವರು ಪೂರಕವಾದ ಮಾಹಿತಿಗಳನ್ನೂ ನೀಡಿದ್ದಾರೆ. ಟಿಪ್ಪು ಆಡಳಿತದಲ್ಲಿ ಕನ್ನಡ ತೆಗೆದು ಪರ್ಷಿಯನ್‌ ಭಾಷೆ ಜಾರಿ ತಂದದ್ದು ಮತ್ತು ಕೊಡವರ ಮೇಲೆ ದೌರ್ಜನ್ಯ ಎಸಗಿದ ಬಗ್ಗೆ ದಾಖಲೆಗಳನ್ನು ಸಲ್ಲಿಸಿದ್ದಾರೆ ಎಂದು ವಿವರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT