
ಬೆಂಗಳೂರು: ರಾಜ್ಯದ ದಕ್ಷಿಣ ಒಳನಾಡು ಮತ್ತು ಮಲೆನಾಡು ಭಾಗಗಳಲ್ಲಿ ಮುಂದಿನ 2 ರಿಂದ 3 ದಿನಗಳವರೆಗೆ ಕನಿಷ್ಠ ತಾಪಮಾನವು ಸಾಮಾನ್ಯಕಿಂತ 3 ರಿಂದ 4 ಡಿಗ್ರಿ ಸೆಲ್ಸಿಯಸ್ ಕಡಿಮೆ ಇರುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ರಾಜ್ಯದಾದ್ಯಂತ ಒಣ ಹವೆ ಮುಂದುವರಿಯುವ ಸಾಧ್ಯತೆಯಿದ್ದು, ಚಳಿ ಹಾಗೂ ಅಲ್ಲಲ್ಲಿ ಮುಂಜಾನೆ ಮಂಜಿನ ವಾತಾವರಣ ಇರುವ ಸಾಧ್ಯತೆಯಿದೆ ಎಂದು ಹೇಳಿದೆ.
ಇಂದು(ಜ.24) ಚಿಕ್ಕಮಗಳೂರು ಜಿಲ್ಲೆಯಲ್ಲಿ 9 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ಇದು ರಾಜ್ಯದಲ್ಲಿ ದಾಖಲಾಗಿರುವ ಅತಿ ಕಡಿಮೆ ತಾಪಮಾನವಾಗಿದೆ. ಹಾಸನ, ಮೈಸೂರು, ಬೆಳಗಾವಿ, ಚಾಮರಾಜನಗರ, ಶಿವಮೊಗ್ಗ ಜಿಲ್ಲೆಗಳಲ್ಲಿ 10 ಡಿಗ್ರಿ ಸೆಲ್ಸಿಯಸ್‌ಗಿಂತ ಕಡಿಮೆ ತಾಪಮಾನ ದಾಖಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 17.3 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದ್ದು, ಕರಾವಳಿ ಭಾಗದಲ್ಲಿ ಒಣ ಹವೆ ಮುಂದುವರಿಯುವ ಸಾಧ್ಯತೆಯಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.