ADVERTISEMENT

ಕಾರವಾರ: ತಾಪಮಾನ 40.2 ಡಿಗ್ರಿ ಸೆಲ್ಸಿಯಸ್‌ ದಾಖಲು

​ಪ್ರಜಾವಾಣಿ ವಾರ್ತೆ
Published 9 ಮಾರ್ಚ್ 2023, 16:49 IST
Last Updated 9 ಮಾರ್ಚ್ 2023, 16:49 IST
   

ನವದೆಹಲಿ: ಕಾರವಾರದಲ್ಲಿ ಕಳೆದ ವಾರ 40.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಗುರುವಾರ ತಿಳಿಸಿದೆ.

ಮಾರ್ಚ್ 4 ರಂದು ಕಾರವಾರದಲ್ಲಿ ಗರಿಷ್ಠ 40.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ಮತ್ತು ಮಾರ್ಚ್ 8 ರಂದು ಔರಂಗಾಬಾದ್ (ಮರಾಠಾವಾಡ) ನಲ್ಲಿ 9.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ ದಾಖಲಾಗಿದೆ ಐಎಂಡಿ ಹೇಳಿಕೆಯಲ್ಲಿ ತಿಳಿಸಿದೆ.

ಮಾರ್ಚ್ 10ರಂದು ದಕ್ಷಿಣ ಕೊಂಕಣ, ಗೋವಾ ಮತ್ತು ಕರಾವಳಿ ಕರ್ನಾಟಕದ ಪ್ರತ್ಯೇಕ ಸ್ಥಳಗಳಲ್ಲಿ ಬಿಸಿ ಗಾಳಿ ಆವರಿಸುವ ಸಾಧ್ಯತೆಯಿದೆ ಎಂದು ಹೇಳಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.