ADVERTISEMENT

ಇಂದಿನಿಂದ 9ರವರೆಗೆ ದಕ್ಷಿಣ ಒಳನಾಡಿನಲ್ಲಿ ಭಾರಿ ಮಳೆ!

​ಪ್ರಜಾವಾಣಿ ವಾರ್ತೆ
Published 4 ಅಕ್ಟೋಬರ್ 2018, 19:53 IST
Last Updated 4 ಅಕ್ಟೋಬರ್ 2018, 19:53 IST
   

ಬೆಂಗಳೂರು:ಅಕ್ಟೋಬರ್ 5ರಿಂದ 9ರವರೆಗೆ ರಾಜ್ಯದ ದಕ್ಷಿಣ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿಯಲ್ಲಿ ಶುಕ್ರವಾರ ಸಂಜೆ ವೇಳೆಗೆ 40ರಿಂದ 50 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಮತ್ತು ಲಕ್ಷದ್ವೀಪ ಪ್ರದೇಶದಿಂದ ಕರಾವಳಿ ತೀರದವರೆಗೆ ಭಾರಿ ಎತ್ತರದ ಅಲೆಗಳು ಏಳುವ ಸಾಧ್ಯತೆ ಇದೆ.

ಹೀಗಾಗಿ, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಮುನ್ಸೂಚನೆ ನೀಡಲಾಗಿದೆ. ಈಗಾಗಲೇ ಆಳ ಸಮುದ್ರ ಮೀನುಗಾರಿಕೆಗೆ ಹೋಗಿರುವವರು ಶುಕ್ರವಾರ (ಅಕ್ಟೋಬರ್ 5) ಸಂಜೆಯ ಒಳಗೆ ವಾಪಸ್ ಆಗುವಂತೆ ಸೂಚನೆ ನೀಡಿದೆ.

ADVERTISEMENT

* ಇದನ್ನೂ ಓದಿ...

ಅರಬ್ಬಿ ಸಮುದ್ರದಲ್ಲಿ ಚಂಡಮಾರುತ ಸೃಷ್ಟಿಯಾಗಿರುವುದರಿಂದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಗುರುವಾರ ಸಂಜೆಯಿಂದ ಮಳೆ ಆರಂಭವಾಗಿದೆ. ಗುಡುಗು–ಸಿಡಿಲು ಸಹಿತ ಮಳೆ ಸುರಿದಿದ್ದು, ತಂಪಾದ ವಾತಾವರಣ ನಿರ್ಮಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.