ADVERTISEMENT

ತಾಪಮಾನ ಏರಿಕೆ: ಹಗುರ ಮಳೆ ಸಾಧ್ಯತೆ

​ಪ್ರಜಾವಾಣಿ ವಾರ್ತೆ
Published 4 ಮಾರ್ಚ್ 2020, 18:30 IST
Last Updated 4 ಮಾರ್ಚ್ 2020, 18:30 IST

ಬೆಂಗಳೂರು: ರಾಜ್ಯದಲ್ಲಿ ದಿಢೀರ್ತಾಪಮಾನ ಏರಿಕೆಯಾದ ಕಾರಣ ಮಾರ್ಚ್‌ 5 ಮತ್ತು 6ರಂದು ದಕ್ಷಿಣ ಒಳನಾಡಿನ ಹಲವೆಡೆ ಹಗುರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.‌

ತಾಪಮಾನ ಏರಿಕೆಯಿಂದದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳ ಕೆಲವೆಡೆ ಮಳೆ ಸಾಧ್ಯತೆ ಇದೆ.

ರಾಜ್ಯದಲ್ಲಿ ಚಳಿ ಪ್ರಮಾಣ ಕಡಿಮೆಯಾಗಿದೆ. ಉತ್ತರ ಒಳನಾಡಿನಲ್ಲಿ ಶುಷ್ಕ ವಾತಾವರಣ ಇರಲಿದೆ.

ADVERTISEMENT

ಬುಧವಾರ ಕಲಬುರ್ಗಿಯಲ್ಲಿ 37.1 ಡಿಗ್ರಿ ಸೆಲ್ಸಿಯಸ್‌ ಗರಿಷ್ಠ ತಾಪಮಾನ ,ವಿಜಯಪುರದಲ್ಲಿ 14.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ ದಾಖಲಾಗಿದೆ. ಹಾಸನ, ಚನ್ನರಾಯಪಟ್ಟಣ ಹಾಗೂ ನೆಲಮಂಗಲದಲ್ಲಿ ತಲಾ 1 ಸೆಂ.ಮೀ.ಮಳೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.