ಬೆಂಗಳೂರು: ಕರಾವಳಿಯ ಎಲ್ಲ ಜಿಲ್ಲೆಗಳು ಹಾಗೂ ರಾಜ್ಯದ ವಿವಿಧೆಡೆ ಎರಡು ದಿನ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕನಿಷ್ಠ ಉಷ್ಣಾಂಶವು ಒಳನಾಡಿನ ಒಂದೆರಡು ಕಡೆಗಳಲ್ಲಿ ಸಾಮಾನ್ಯಕ್ಕಿಂತ 2–3 ಡಿಗ್ರಿ ಸೆಲ್ಸಿಯಸ್ ಕಡಿಮೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ಯಾದಗಿರಿ ಜಿಲ್ಲೆ ಹಾಗೂ ದಕ್ಷಿಣ ಒಳನಾಡಿನ ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ಶಿವಮೊಗ್ಗ, ತುಮಕೂರು ಜಿಲ್ಲೆಯಲ್ಲಿಯೂ ಒಂದೆರಡು ಕಡೆ ಗುಡುಗು ಸಹಿತ ಮಳೆಯಾಗುವ ಸಂಭವವಿದೆ.
ಬೆಂಗಳೂರು ನಗರದಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇರುತ್ತದೆ. ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮಂಜು ಮುಸುಕುವ ಸಾಧ್ಯತೆ ಇದೆ ಎಂದು ಇಲಾಖೆ ಹೇಳಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.