ADVERTISEMENT

ಯಾರಿಗೆ ಶಿಕ್ಷೆಯಾಗಿದೆ? ಸತ್ಯಾಂಶ ಹೊರಬರುವುದೇ: ಎಚ್‌ಡಿಕೆ ಪ್ರಶ್ನೆ

​ಪ್ರಜಾವಾಣಿ ವಾರ್ತೆ
Published 24 ಜನವರಿ 2023, 21:57 IST
Last Updated 24 ಜನವರಿ 2023, 21:57 IST
   

ಬಾಗಲಕೋಟೆ: ‘ರಾಜಕಾರಣಿಗಳ ವಿರುದ್ಧದ ಭ್ರಷ್ಟಾಚಾರ ಪ್ರಕರಣಗಳಲ್ಲಿ ಯಾರಿಗೆ ಶಿಕ್ಷೆ ಆಗಿದೆ? ಬಿಜೆಪಿ, ಕಾಂಗ್ರೆಸ್‌ ನಾಯಕರ ಬೆಂಬಲವಿರುವಾಗ ತನಿಖೆಯಿಂದ ಸತ್ಯಾಂಶ ಹೊರಬರುವುದೇ’ ಎಂದು ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ. ಕುಮಾರಸ್ವಾಮಿ ಪ್ರಶ್ನಿಸಿದರು.

ಮಂಗಳವಾರ ಬಾದಾಮಿ ತಾಲ್ಲೂಕಿನ ಆಡಗಲ್‌ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಸರ್ಕಾರದಲ್ಲಾದ ಭ್ರಷ್ಟಾಚಾರ ಪ್ರಕರಣಗಳನ್ನು ಲೋಕಾಯುಕ್ತ ತನಿಖೆಗೆ ಒಪ್ಪಿಸುತ್ತಿರುವ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿ, ‘ಲಾಲೂ ಪ್ರಸಾದ ಯಾದವ್ ಬಿಟ್ಟರೆ ಯಾರಿಗೂ ಶಿಕ್ಷೆಯಾಗಿಲ್ಲ’ ಎಂದರು.

‘ಪಿಎಸ್‌ಐ ಹಗರಣದಲ್ಲಿ ಬಂಧಿತ ವ್ಯಕ್ತಿ ಮುಖ್ಯಮಂತ್ರಿ ಬೊಮ್ಮಾಯಿ ಅವರ ಸ್ವಾಗತದ ಫ್ಲೆಕ್ಸ್ ಹಾಕುತ್ತಾನೆ. ಕಾಂಗ್ರೆಸ್‌ ಮುಖಂಡರದ್ದೂ ಇದೆ. ಅವರ ರಕ್ಷಣೆ ಇರುವಾಗ ತನಿಖೆಯಿಂದ ಯಾವ ಫಲಿತಾಂಶವೂ ಬರುವುದಿಲ್ಲ’ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.