ADVERTISEMENT

ಮುಡಾ ಪ್ರಕರಣ ಸಿಬಿಐಗೆ ವಹಿಸುವ ಬಗ್ಗೆ ನನಗೇಕೆ ಆತಂಕ: ಸಿದ್ದರಾಮಯ್ಯ ಪ್ರಶ್ನೆ

​ಪ್ರಜಾವಾಣಿ ವಾರ್ತೆ
Published 28 ಜನವರಿ 2025, 16:05 IST
Last Updated 28 ಜನವರಿ 2025, 16:05 IST
<div class="paragraphs"><p> ಸಿದ್ದರಾಮಯ್ಯ</p></div>

ಸಿದ್ದರಾಮಯ್ಯ

   

ಬೆಂಗಳೂರು: ‘ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸುವ ಬಗ್ಗೆ ನನಗೇಕೆ ಆತಂಕವಾಗಬೇಕು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು.

ಪ್ರಕರಣವನ್ನು ಸಿಬಿಐಗೆ ವಹಿಸಬಹುದೆಂಬ ಆತಂಕವಿದೆಯೇ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ, ‘ನಮಗೆ ನ್ಯಾಯ ಸಿಗುತ್ತದೆ ಎಂಬ ಭರವಸೆ ಇದೆ. ಮುಡಾ ಪ್ರಕರಣವೇ ರಾಜಕೀಯ ಪ್ರೇರಿತ’ ಎಂದು ಹೇಳಿದರು.

ADVERTISEMENT

‘ಜಾರಿ ನಿರ್ದೇಶನಾಲಯದ ನೋಟಿಸಿಗೆ ನ್ಯಾಯಾಲಯ ತಡೆಯಾಜ್ಞೆ ನೀಡಿದೆ. ತನಿಖೆ ನಡೆಯುತ್ತಿದ್ದು, ಸಿಬಿಐಗೆ ಪ್ರಕರಣವನ್ನು ವಹಿಸುವ ಬಗ್ಗೆ ಚರ್ಚೆ ನಡೆಯುತ್ತಿದ್ದು, ವಾದ ನಡೆಯು ಹಂತದಲ್ಲಿದೆ. ಈ ಹಂತದಲ್ಲಿ ಆತುರ ಮಾಡುವುದು ಸರಿಯಲ್ಲ ಎಂದು ನ್ಯಾಯಮೂರ್ತಿಗಳೇ ಹೇಳಿದ್ದಾರೆ’ ಎಂದರು.

ಮೈಕ್ರೊ ಫೈನಾನ್ಸ್‌ ಹಾವಳಿ ತಡೆಗಟ್ಟಲು ಸುಗ್ರೀವಾಜ್ಞೆ ಹೊರಡಿಸುವ ಬಗ್ಗೆ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಲಾಗುವುದು ಎಂದು ಸಿದ್ದರಾಮಯ್ಯ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.