ADVERTISEMENT

ಸಿದ್ದರಾಮಯ್ಯ ಅವರೇ ನಿಮ್ಮ ಮೇಲೆ ರೌಡಿ ಶೀಟರ್‌ ಏಕೆ ತೆರೆಯಬಾರದು? CM ಕೆಣಕಿದ BJP

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 29 ಏಪ್ರಿಲ್ 2025, 10:53 IST
Last Updated 29 ಏಪ್ರಿಲ್ 2025, 10:53 IST
ಬೆಳಗಾವಿಯಲ್ಲಿ ಸೋಮವಾರ ಕಾಂಗ್ರೆಸ್‌ ಸಮಾವೇಶದಲ್ಲಿ ಎಎಸ್ಪಿ ನಾರಾಯಣ ಭರಮನಿ ಅವರತ್ತ ಮುಖ್ಯಮಂತ್ರಿ ಸಿದ್ದರಾಮಯ್ಯ ಕೈ ಎತ್ತಿದರು.
ಬೆಳಗಾವಿಯಲ್ಲಿ ಸೋಮವಾರ ಕಾಂಗ್ರೆಸ್‌ ಸಮಾವೇಶದಲ್ಲಿ ಎಎಸ್ಪಿ ನಾರಾಯಣ ಭರಮನಿ ಅವರತ್ತ ಮುಖ್ಯಮಂತ್ರಿ ಸಿದ್ದರಾಮಯ್ಯ ಕೈ ಎತ್ತಿದರು.   

ಬೆಂಗಳೂರು: ಬೆಳಗಾವಿಯಲ್ಲಿ ನಿನ್ನೆ ಕಾಂಗ್ರೆಸ್ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಪೊಲೀಸ್ ಮೇಲೆ ತೋರಿದ ಪ್ರತಾಪವನ್ನು ಮುಂದಿಟ್ಟುಕೊಂಡು ರಾಜ್ಯ ಬಿಜೆಪಿ ಅವರ ಮೇಲೆ ವಾಗ್ದಾಳಿ ಮುಂದುವರೆಸಿದೆ.

ಎಎಸ್‌ಪಿ ಮೇಲೆ ಹಲ್ಲೆ ಮಾಡಲು ಮುಂದಾದ ನಿಮ್ಮ ಮೇಲೆ ರೌಡಿ ಶೀಟರ್‌ ಏಕೆ ತೆರೆಯಬಾರದು? ಎಂದು ಸಿದ್ದರಾಮಯ್ಯ ಅವರನ್ನು ನೇರವಾಗಿ ಕೆಣಕಿದೆ. ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಹಂಚಿಕೊಂಡಿದೆ.

ಮುಖ್ಯಮಂತ್ರಿ ಕುರ್ಚಿಯ ವ್ಯಾಲಿಡಿಟಿ ಅಂತ್ಯವಾಗುವ ಸಮಯ ಸಮೀಪಿಸುತ್ತಿದ್ದಂತೆಯೇ ಮುಖ್ಯಮಂತ್ರಿ ಅವರಿಗೆ ಹತಾಶೆ ಬಹುವಾಗಿ ಕಾಡುತ್ತಿದೆ. ಸಾರ್ವಜನಿಕ ಜೀವನದಲ್ಲಿದ್ದೇನೆ ಎಂಬ ಪರಿಜ್ಞಾನವೂ ಇಲ್ಲವೆಂಬಂತೆ ಸಿದ್ದರಾಮಯ್ಯ ವರ್ತಿಸುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದೆ.

ADVERTISEMENT

ಮನೆಮಂದಿಯ ಮೇಲೆ ರೇಗಾಡುವ ಹಾಗೆ ಸರ್ಕಾರಿ ಅಧಿಕಾರಿಗಳ ಮೇಲೆ ರೇಗಾಡುತ್ತಿದ್ದಾರೆ, ಪೊಲೀಸ್‌ ಅಧಿಕಾರಿಯ ಮೇಲೆ ಕೈ ಎತ್ತುತ್ತಿದ್ದಾರೆ, ಮಹಿಳೆಯರೊಂದಿಗೆ ಸಾರ್ವಜನಿಕ ಸ್ಥಳದಲ್ಲಿ ಅಸಭ್ಯವಾಗಿ ನಡೆದುಕೊಳ್ಳುತ್ತಿದ್ದಾರೆ ಎಂದು ಟೀಕಿಸಿದೆ.

ದರ್ಪದಿಂದ ಸರ್ಕಾರಿ ಅಧಿಕಾರಿಗಳೊಂದಿಗೆ ನಡೆದುಕೊಳ್ಳುತ್ತಿರುವುದು ಮುಖ್ಯಮಂತ್ರಿ ಕುರ್ಚಿಗೆ ಮಾಡುತ್ತಿರುವ ಅವಮಾನವಾಗಿದೆ. ಸಿಎಂ ಅವರೇ, ನಿಮ್ಮ ಗೂಂಡಾಗಿರಿಗೆ ಕೊನೆಯೆಂದು? ನಿಮ್ಮ ಮೇಲೆ ರೌಡಿ ಶೀಟರ್‌ ಏಕೆ ತೆರೆಯಬಾರದು? ಎಂದು ಪ್ರಶ್ನಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.