ಆನೆ ದಾಳಿ
ನವದೆಹಲಿ: ಹಾಸನ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಆನೆ ದಾಳಿಯಿಂದ ಮೃತಪಟ್ಟ ಕುಟುಂಬದವರಿಗೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ನಿಧಿಯಿಂದ (ಎನ್‌ಡಿಆರ್‌ಎಫ್) ಪರಿಹಾರ ನೀಡಬೇಕು ಎಂದು ಸಂಸದ ಶ್ರೇಯಸ್ ಎಂ. ಪಟೇಲ್ ಆಗ್ರಹಿಸಿದರು.
ಲೋಕಸಭೆಯಲ್ಲಿ ಬುಧವಾರ ವಿಷಯ ಪ್ರಸ್ತಾಪಿಸಿದ ಅವರು, ‘ಹಾಸನ ಕ್ಷೇತ್ರದಲ್ಲಿ ಮಾನವ–ಪ್ರಾಣಿ ಸಂಘರ್ಷ ತೀವ್ರವಾಗಿದೆ. ಆನೆ ದಾಳಿಯಿಂದ ಕಳೆದೊಂದು ತಿಂಗಳಲ್ಲಿ ನಾಲ್ಕು ಮಂದಿ ಸತ್ತಿದ್ದಾರೆ. ಕಳೆದ 25 ವರ್ಷಗಳಲ್ಲಿ 80 ಮಂದಿ ಮೃತಪಟ್ಟಿದ್ದಾರೆ. ಕ್ಷೇತ್ರದಲ್ಲಿ 80 ಆನೆಗಳಿವೆ. ಅವುಗಳ ಹಾವಳಿ ತೀವ್ರವಾಗಿದೆ’ ಎಂದರು.
ಆನೆಗಳ ದಾಳಿಯಿಂದ ರೈತರು ಆತಂಕಗೊಂಡಿದ್ದಾರೆ. ಕ್ಷೇತ್ರದಲ್ಲಿ ಭತ್ತ ಬೆಳೆಯುವುದನ್ನು ನಿಲ್ಲಿಸಲು ಆರಂಭಿಸಿದ್ದಾರೆ. ಬೇಲೂರು ಹಾಗೂ ಸಕಲೇಶಪುರ ತಾಲ್ಲೂಕುಗಳಲ್ಲಿ ಪರಿಸ್ಥಿತಿ ಕೈಮೀರಿದೆ. ಆನೆಗಳನ್ನು ಬೇರೆ ಕಡೆೆಗೆ ಸ್ಥಳಾಂತರ ಮಾಡುವುದು ತಾತ್ಕಾಲಿಕ ಪರಿಹಾರ ಅಷ್ಟೇ. ಈ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಹಿಡಿಯಬೇಕು’ ಎಂದು ಅವರು ಮನವಿ ಮಾಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.