ಕಾಡ್ಗಿಚ್ಚು
ನವದೆಹಲಿ: ಕರ್ನಾಟಕದಲ್ಲಿ 2022–23ನೇ ಸಾಲಿನಲ್ಲಿ 3,305 ಕಾಡ್ಗಿಚ್ಚು ಪ್ರಕರಣಗಳು ದಾಖಲಾಗಿದ್ದರೆ, 2023–24ರಲ್ಲಿ 613 ಪ್ರಕರಣಗಳು ಘಟಿಸಿವೆ ಎಂದು ಕೇಂದ್ರ ಅರಣ್ಯ, ಪರಿಸರ ಖಾತೆಯ ರಾಜ್ಯ ಸಚಿವ ಕೀರ್ತಿವರ್ಧನ್ ಸಿಂಗ್ ತಿಳಿಸಿದ್ದಾರೆ.
ರಾಜ್ಯಸಭೆಯಲ್ಲಿ ಗುರುವಾರ ಕಾಂಗ್ರೆಸ್ ಸದಸ್ಯ ಜಿ.ಸಿ.ಚಂದ್ರಶೇಖರ್ ಕೇಳಿದ ಪ್ರಶ್ನೆಗೆ ಉತ್ತರ ನೀಡಿರುವ ಅವರು, ‘ಕಾಡ್ಗಿಚ್ಚು ತಡೆಗಟ್ಟಲು ಕೇಂದ್ರ ಸರ್ಕಾರವು ರಾಜ್ಯಗಳಿಗೆ ಹಣಕಾಸಿನ ನೆರವು ನೀಡುತ್ತಿದೆ. ಜತೆಗೆ, ಜಲಮೂಲಗಳ ಪುನರುಜ್ಜೀವನ, ಲಂಟಾನಾದಂತಹ ಗಿಡಗಳ ನಾಶ ಹಾಗೂ ಜನರಲ್ಲಿ ಜಾಗೃತಿ ಮೂಡಿಸುವ ಉಪಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ’ ಎಂದು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.