ADVERTISEMENT

ಶಿಕಾರಿಪುರದಲ್ಲಿ ಸ್ಪರ್ಧೆ, ಪಕ್ಷದಿಂದ ತೀರ್ಮಾನ: ವಿಜಯೇಂದ್ರ

​ಪ್ರಜಾವಾಣಿ ವಾರ್ತೆ
Published 8 ಆಗಸ್ಟ್ 2022, 7:43 IST
Last Updated 8 ಆಗಸ್ಟ್ 2022, 7:43 IST
ವಿಜಯೇಂದ್ರ
ವಿಜಯೇಂದ್ರ   

ಶಿಕಾರಿಪುರ: ‘ನಾನು ಶಿಕಾರಿಪುರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸುವ ಬಗ್ಗೆ ಪಕ್ಷ ನಿರ್ಧಾರ ಕೈಗೊಳ್ಳಲಿದೆ' ಎಂದು ಬಿಜೆಪಿ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ತಿಳಿಸಿದರು.

ಪಟ್ಟಣದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತಾಲ್ಲೂಕಿನ ಮುಖಂಡರು ಹಾಗೂ ಕಾರ್ಯಕರ್ತರ ಒತ್ತಡಕ್ಕೆ ಮಣಿದು ವಿಜಯೇಂದ್ರ ಈ ಕ್ಷೇತ್ರದಿಂದ ಸ್ಪರ್ಧಿಸುತ್ತಾನೆ ಎಂದು ಯಡಿಯೂರಪ್ಪ ಹೇಳಿದ್ದಾರೆ.

ಆದರೆ ನಾನು ಸ್ಪರ್ಧಿಸುವ ಬಗ್ಗೆ ಪಕ್ಷ ತೀರ್ಮಾನ ಕೈಗೊಳ್ಳುತ್ತದೆ. ಕ್ಷೇತ್ರದ ಅಭ್ಯರ್ಥಿಯಾಗುವ ಕಾರಣ ಕ್ಷೇತ್ರದಲ್ಲಿ ಪ್ರವಾಸ ಮಾಡುತ್ತಿಲ. ಶಿಕಾರಿಪುರ ಕ್ಷೇತ್ರ ನನಗೆ ಹೊಸದಲ್ಲ,ಹಿಂದೆಯೂ ಕ್ಷೇತ್ರದಲ್ಲಿ ಪ್ರವಾಸ ಮಾಡಿದ್ದೇನೆ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.